ಕರ್ನಾಟಕಪ್ರಮುಖ ಸುದ್ದಿ

ಬಿಗ್ ಬಾಸ್ ಮಾಜಿ ಸ್ಪರ್ಧಿ, ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆಗೆ ಶರಣು

ಬೆಂಗಳೂರು,ಜ.25- ಬಿಗ್‌ಬಾಸ್ ಮಾಜಿ ಸ್ಪರ್ಧಿ, ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ಜಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಗ್‌ಬಾಸ್ ಸೀಸನ್ ಮೂರರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ಜಯಶ್ರೀ ಅವರು ಈ ಹಿಂದೆ ಎರಡು ಬಾರಿ ಆತ್ಮಹತ್ಯೆ ಪ್ರಯತ್ನ ಮಾಡಿದ್ದರು. ಆಗ ಸೂಕ್ತ ಚಿಕಿತ್ಸೆ ಪಡೆದು ಸಾವಿನಿಂದ ಪಾರಾಗಿದ್ದರು.

ಜಯಶ್ರೀ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಫೇಸ್‌ಬುಕ್ ಲೈವ್‌ ನಲ್ಲಿ ಒಮ್ಮೆ ತಮಗೆ ದಯಾಮರಣ ಪ್ರಾಪ್ತಿ ಮಾಡಿ ನನಗೆ ಬದುಕಲು ಇಷ್ಟವಿಲ್ಲ. ನಾನು ಒಳ್ಳೆಯ ಹುಡುಗಿ ಅಲ್ಲ ಎಂದಿದ್ದರು.

ಜಯಶ್ರೀ ಕುಟುಂಬದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಜಗಳ ನಡೆದಿತ್ತು. ಜಯಶ್ರೀ ಅವರು ತಮ್ಮ ಮಾವನ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಮ್ಮ ಮಾವ ನನ್ನನ್ನು ಹಾಗೂ ತಾಯಿಯನ್ನು ಮನೆಯಿಂದ ಹೊರಗೆ ಹಾಕಿದ್ದಾರೆ, ಆಸ್ತಿ ವಿಷಯವಾಗಿ ನಮ್ಮ ಮೇಲೆ ದಬ್ಬಾಳಿಕೆ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದರು.

ಮಾರನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ಎಂ.ಎನ್)

Leave a Reply

comments

Related Articles

error: