ಮೈಸೂರು

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆ ಆತ್ಮಹತ್ಯೆ

ಮೈಸೂರು,ಜ.27:- ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೊಲೀಸ್ ವಸತಿ ಗೃಹದಲ್ಲಿ ನಡೆದಿದೆ.
ಮೃತರನ್ನು ಪೊಲೀಸ್ ವಸತಿ ಗೃಹದ ನಿವಾಸಿ ಚೈತ್ರಾ(25)ಎಂದು ಹೇಳಲಾಗಿದೆ. ಕಳೆದ 6ತಿಂಗಳ ಹಿಂದಷ್ಟೇ ಪೊಲೀಸ್ ಸಿಬ್ಬಂದಿ ಮೋಹನ್ ಆರಾಧ್ಯ ಅವರನ್ನು ವಿವಾಹವಾಗಿದ್ದರು. ಮ ನೆಯಲ್ಲಿ ಯಾರೂ ಇಲ್ಲದ ವೇಳೆ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶೃಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹೆಬ್ಬಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: