ಮೈಸೂರು

ಬೆಂಕಿಯುಗುಳುವ ಪ್ರದೇಶಕ್ಕೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಭೇಟಿ ಪರಿಶೀಲನೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಭೂಮಿಯಲ್ಲಿ ಬೆಂಕಿಯುಗುಳಿ ಓರ್ವ ಬಾಲಕ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯವನ್ನು ಸುರಿಯಲಾಗಿದೆ ಎನ್ನಲಾದ ಸ್ಥಳದಲ್ಲಿ ಯಾವುದೇ ಭಾರವಾದ ವಸ್ತುವನ್ನು ಹಾಕಿದರೂ ಅದು ಸಿಡಿಯುವಂತೆ ಭಾಸವಾಗುತ್ತಿದೆ ಎನ್ನಲಾದ ಸ್ಥಳಕ್ಕೆ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾದನಹಳ್ಳಿಯಲ್ಲಿ ಈ ವಿಚಿತ್ರ ಘಟನೆ ನಡೆದಿದ್ದು, ಜಮೀನು ಸೋಮಣ್ಣ ಎಂಬವರಿಗೆ ಸೇರಿದ್ದಾಗಿದ್ದು, ಅಲ್ಲಿ ಯಾವುದೇ ಕೃಷಿ ಚಟುವಟಿಕೆಗಳನ್ನು ನಡೆಸಲಾಗುತ್ತಿಲ್ಲ. ಅದು ಪಾಳು ಬಿದ್ದ ಸ್ಥಿತಿಯಲ್ಲಿದ್ದು, ಸ್ಥಳೀಯರು ಹೇಳುವಂತೆ ಅಲ್ಲಿ ರಬ್ಬರ್ ತಯಾರಿಕಾ ಕಾರ್ಖಾನೆ ಸೇರಿದಂತೆ ಹಲವು ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯವನ್ನು ಸುರಿಯಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಇದು ಏನೇನ್ನುವುದು ವೈಜ್ಞಾನಿಕವಾಗಿ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇಲ್ಲಿ ಕೈಗಾರಿಕಾ ಕಂಪನಿಗಳು ಈಗಾಗಲೇ ಇವೆ. ಇದರ ಜೊತೆ ವಸತಿ ಗೃಹಗಳು ತಲೆ ಎತ್ತುತ್ತಿವೆ. ಮುಂದೆ ಅಪಾಯವಿದೆ ಅಂತ  ಅನ್ನಿಸಲ್ಲವಾ ಎಂದು ಪತ್ರಕರ್ತರು ಪ್ರಶ್ನಿಸಿದಾಗ ಆ ಕುರಿತು ಗಮನ ಹರಿಸಲಾಗುವುದು ಎಂದರು. ಈ ಸಂದರ್ಭ ಶಾಸಕರಾದ ವಾಸು, ಸೊಮಶೇಖರ್ ಮತ್ತಿತರರು ಸಚಿವರ ಜೊತೆಗಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: