ಕರ್ನಾಟಕಪ್ರಮುಖ ಸುದ್ದಿ

ವಿಧಾನಮಂಡಲ ಅಧಿವೇಶನದಲ್ಲಿನ ರಾಜ್ಯಪಾಲರ ಭಾಷಣ ಸುಳ್ಳಿನ ಕಂತೆ: ಸಿದ್ದರಾಮಯ್ಯ ಅಸಮಾಧಾನ

ಬೆಂಗಳೂರು,ಜ.28- ರಾಜ್ಯ ಸರ್ಕಾರ ರಾಜ್ಯಪಾಲರ ಮೂಲಕ ಭಾಷಣ ಮಾಡಿಸಿದ್ದು, ಇದೊಂದು ಸುಳ್ಳಿನ ಕಂತೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಧಾನಮಂಡಲ ಅಧಿವೇಶನದಲ್ಲಿ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಮಾಡಿದ ಭಾಷಣದ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಮಾತನಾಡಿದರು.

ರಾಜ್ಯ ಸರ್ಕಾರ ರಾಜ್ಯಪಾಲರ ಮೂಲಕ ಭಾಷಣ ಮಾಡಿಸಿದೆ. ರಾಜ್ಯಪಾಲರ ಬಾಯಿಯಿಂದ ಸುಳ್ಳು ಹೇಳಿಸಿದೆ. ರಾಜ್ಯಪಾಲರು ಸರ್ಕಾರ ಬರೆದುಕೊಟ್ಟಿದನ್ನು ಓದಿದ್ದಾರೆ. ಭಾಷಣದಲ್ಲಿ ಸ್ಪಷ್ಟತೆ ಇರಬೇಕು. ಸರ್ಕಾರದ ನಿಲುವು, ಯೋಜನೆಗಳು, ಧ್ಯೆಯ ಧೊರಣೆಗಳು, ಮುನ್ನೋಟ ಇರಬೇಕು. ಆದರೆ, ಈ ಭಾಷಣ ನೋಡಿದಾಗ ಯಾವುದೂ ಕಾಣಿಸುವುದಿಲ್ಲ. ಇದೊಂದು ಸುಳ್ಳಿನ ಕಂತೆ ಎಂದರು.

ಭಾಷಣಕ್ಕೆ ಗೊತ್ತು ಗುರಿ ಏನೂ ಇಲ್ಲ. ಇನ್ನು ಎರಡು ವರ್ಷ ಇದೆ, ಒಂದು ದೂರದೃಷ್ಟಿ ಇರಬೇಕು. ಆದರೆ ಸರ್ಕಾರಕ್ಕೆ ಯಾವುದೇ ದೂರ ದೃಷ್ಟಿಯಿಲ್ಲ. ಇವರು ಅಧಿಕಾರಕ್ಕೆ ಬಂದು ಒಂದು ವರ್ಷ ಏಳು ತಿಂಗಳಾಯಿತು. ಇಷ್ಟು ದಿನದಲ್ಲಿ ಇವರ ಸಾಧನೆ ಏನೆಂದು ಭಾಷಣದಲ್ಲಿ ಹೇಳಲಿಲ್ಲ. ಈ ಸರ್ಕಾರದ ಸಾಧನೆ ಶೂನ್ಯ. ಇದು ರಾಜ್ಯದ ಪ್ರಗತಿಯ ಯಾವುದೇ ದೂರದೃಷ್ಟಿ ಇಲ್ಲದ ಭಾಷಣ. ಕರ್ನಾಟಕದ ಇತಿಹಾಸದಲ್ಲಿ ಇಂತಹ ಕಳಪೆ ಭಾಷಣ ನಾನು ನೋಡಿರಲಿಲ್ಲ ಎಂದು ಕಟುವಾಗಿ ಟೀಕಿಸಿದರು.

ಭಾಷಣದಲ್ಲಿ ಹಣಕಾಸಿನ ಪರಿಸ್ಥಿತಿ ಬಗ್ಗೆ ಪ್ರಸ್ತಾಪ ಮಾಡಿಲ್ಲ. ರಾಜ್ಯ ಅಭಿವೃದ್ಧಿಯಲ್ಲಿ ಹತ್ತು ವರ್ಷಗಳಷ್ಟು ಹಿಂದೆ ಹೋಗಿದೆ. ಎಲ್ಲೆಲ್ಲೂ ಕೊರೊನಾ ನೆಪ ಹೇಳುತ್ತಿದ್ದಾರೆ. ನೀರಾವರಿ ಯೋಜನೆಗಳಿಗೆ ಹಣ ಇಲ್ಲ. ಶಾಸಕರ ಕ್ಷೇತ್ರದ ನಿಧಿ ಕೇಳಿದರೂ ಕೊರೊನಾ ಎನ್ನುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು. (ಎಂ.ಎನ್)

 

Leave a Reply

comments

Related Articles

error: