ಕ್ರೀಡೆದೇಶಪ್ರಮುಖ ಸುದ್ದಿ

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಎರಡನೇ ಆಂಜಿಯೋಪ್ಲ್ಯಾಸ್ಟಿ : ಹೃದಯದ ರಕ್ತನಾಳಗಳಲ್ಲಿ ಎರಡು ಸ್ಟೆಂಟ್‌ ಅಳವಡಿಕೆ

ದೇಶ(ನವದೆಹಲಿ)ಜ.29:- ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಪ್ರಸ್ತುತ ಅಧ್ಯಕ್ಷ ಮತ್ತು ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಆಂಜಿಯೋಪ್ಲ್ಯಾಸ್ಟಿ ಮಾಡಲಾಗಿದೆ. ಆಸ್ಪತ್ರೆಯ ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ. ಇದಕ್ಕೂ ಮೊದಲು ಜನವರಿ 2 ರಂದು ಅವರ ಹೃದಯದಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆ ಆಂಜಿಯೋಪ್ಲ್ಯಾಸ್ಟಿ ಮಾಡಲಾಗಿತ್ತು.
ಖ್ಯಾತ ಹೃದ್ರೋಗ ತಜ್ಞ ದೇವಿ ಶೆಟ್ಟಿ ಗಂಗುಲಿಯವರಿಗೆ ಎಲ್ಲಾ ರೀತಿಯ ಪರೀಕ್ಷೆಗಳನ್ನು ಮಾಡಿದ ನಂತರ ಆಸ್ಪತ್ರೆಯ ವೈದ್ಯರೊಂದಿಗೆ ಸಮಾಲೋಚಿಸಿ ಆಂಜಿಯೋಪ್ಲ್ಯಾಸ್ಟಿ ಮಾಡಲು ನಿರ್ಧರಿಸಿದರು. ಟೀಮ್ ಇಂಡಿಯಾ ಮಾಜಿ ನಾಯಕ 48 ವರ್ಷದ ಸೌರವ್ ಗಂಗೂಲಿಯ ಅಪಧಮನಿಗಳಲ್ಲಿನ ಅಡಚಣೆಯನ್ನು ನಿವಾರಿಸಲು ಎರಡು ಸ್ಟೆಂಟ್ ‌ಗಳನ್ನು ಹಾಕಲಾಗಿದೆ ಎನ್ನಲಾಗಿದೆ.
ಹಿರಿಯ ವೈದ್ಯರೊಬ್ಬರು, “ಅವರ ಸ್ಥಿತಿಯನ್ನು ಅವಲೋಕಿಸಿದ ನಂತರ, ನಾವು ಆಂಜಿಯೋಪ್ಲ್ಯಾಸ್ಟಿ ಮಾಡಲು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: