ಮೈಸೂರು

2021ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಮೈಸೂರು. ಜ 29:- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜನವರಿ 31ರಂದು ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ) 2021 ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇದೇ 2020ನೇ ವರ್ಷದ ಡಿಸೆಂಬರ್ 16ರವರೆಗೆ ಕೇವಲ ಎರಡು ದೇಶಗಳು (ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನ) ಮಾತ್ರ ಪೋಲಿಯೋ ಪೀಡಿತ ರಾಷ್ಟ್ರಗಳ ಪಟ್ಟಿಯಲ್ಲಿವೆ. ವಿಶ್ವದಾದ್ಯಂತ ಒಟ್ಟಾರೆ 2020 ರಲ್ಲಿ 138 ಪ್ರಕರಣಗಳು ವರದಿಯಾಗಿವೆ. ಪಾಕಿಸ್ತಾನ (82) ಮತ್ತು ಆಫ್ಘಾನಿಸ್ತಾನದಲ್ಲಿ (56) ಪೋಲಿಯೊ ಪ್ರಕರಣಗಳು ವರದಿಯಾಗಿರುವುದು ಆತಂಕಕಾರಿಯಾಗಿವೆ. ಈ ನಿಟ್ಟಿನಲ್ಲಿ ನೆರೆ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಆಫ್ಘಾನೀಸ್ತಾನದಲ್ಲಿ ಪೋಲಿಯೊ ಪ್ರಕರಣಗಳು ಕಂಡು ಬಂದಿರುವುದರಿಂದ ವಲಸಿಗರ ಮೂಲಕ ನಮ್ಮ ದೇಶಕ್ಕೆ ಹರಡುವ ಸಾಧ್ಯತೆಯಿರುವುದರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಹಾಗೂ ಎ.ಎಫ್.ಪಿ AFP-Acute Flaccid Paralysis) ) ಸರ್ವೇಕ್ಷಣೆ ಕಾರ್ಯಕ್ರಮಗಳನ್ನು ಅತ್ಯಂತ ಜಾಗರೂಕತೆಯಿಂದ ಮತ್ತು ಜವಾಬ್ದಾರಿಯುತವಾಗಿ ನಿರ್ವಹಿಸಲಾಗುತ್ತಿದೆ.
ಭಾರತದಲ್ಲಿ ಕೊನೆಯ ಪೋಲಿಯೋ ಪ್ರಕರಣ 2011 ಜನವರಿಯಲ್ಲಿ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಮಾರ್ಚ್ 24, 2014ರಲ್ಲಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಪೋಲಿಯೋ ನಿರ್ಮೂಲನೆ ಪ್ರಮಾಣ ಪತ್ರವನ್ನು ನೀಡುವುದರ ಮೂಲಕ ಭಾರತ ದೇಶವು ಪೋಲಿಯೊ ಮುಕ್ತ ರಾಷ್ಟ್ರ ಎಂದು ಘೋಷಿಸಿದರು ಸಹಾ ನಮ್ಮ ಮುಂದಿನ ಪೀಳಿಗೆಯ ಆರೋಗ್ಯವಂತ ಸದೃಢ ಪ್ರಜೆಗಳ ದೇಶವನ್ನು ಕಟ್ಟಲು ಈ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಮುಂದುವರಿಸಿಕೊಂಡು ಬರಲಾಗುತ್ತಿದೆ. ಅದರಂತೆ ಕರ್ನಾಟಕದಲ್ಲಿ ಕೊನೆಯ ಪೋಲಿಯೋ ಪ್ರಕರಣ ನವೆಂಬರ್.3 2007 ರಂದು ರಾಜ್ಯಕ್ಕೆ ವಲಸೆ ಬಂದಿರುವ ಗುಂಪಿನಲ್ಲಿ ಪತ್ತೆಯಾಗಿದ್ದು, ಆ ನಂತರ ಇಲ್ಲಿಯವರೆಗೆ ಯಾವುದೇ ಪೋಲಿಯೋ ಪ್ರಕರಣ ಪತ್ತೆಯಾಗಿರುವುದಿಲ್ಲ ಎಂಬ ವಿಷಯವನ್ನು ಹೇಳಲು ಹೆಮ್ಮೆಯಾಗುತ್ತಿದೆ.
ಈ ಪೋಲಿಯೋ ಖಾಯಿಲೆ ನಿರ್ಮೂಲಯ ಹೆಗ್ಗಳಿಕೆಯು ಇತರ ಇಲಾಖೆಗಳ ಅಧಿಕಾರಿಗಳು, ನೌಕರರು, ಸ್ವಯಂ ಸೇವಕರು ಸಮುದಾಯದ ಅವರಿಗೆ ಸಲ್ಲಬೇಕಾಗಿದೆ.
ಭಾರತ ಸರ್ಕಾರದ ನಿರ್ದೇಶನದಂತೆ ಜನವರಿ 31 ರಂದು ಒಂದು ಸುತ್ತಿನ ಪಲ್ಸ್ ಪೋಲಿಯೋಕಾರ್ಯಕ್ರಮ bOPV ನೀಡುವುದರ ಮೂಲಕ ನಡೆಸಲಾಗುತ್ತಿದೆ. ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಪೋಲಿಯೋ ಲಸಿಕೆಗಳನ್ನು ಶೀತಲ ಸರಪಳಿಯಲ್ಲಿ ನಿರ್ವಹಿಸಿ, ಅತ್ಯಂತ ಸುರಕ್ಷಿತವಾಗಿ ಮಕ್ಕಳಿಗೆ ಲಸಿಕೆ ನೀಡಲಾಗುವುದು.
ಈ ಲಸಿಕೆಯು ಅತ್ಯಂತ ಸುರಕ್ಷಿತವಾಗಿದ್ದು ಪೋಷಕರು ಹಾಗೂ ಸಮುದಾಯವು ಯಾವುದೇ ಆತಂಕಕ್ಕೆ ಒಳಗಾಗದೆ, ವದಂತಿಗಳಿಗೆ ಕಿವಿಗೊಡದೇ ಪೋಷಕರು ತಮ್ಮ ಮಕ್ಕಳನ್ನು ಹತ್ತಿರದ ಲಸಿಕಾ ಕೇಂದ್ರಕ್ಕೆ ತಪ್ಪದೇ ಜನವರಿ 31 ರಂದು ಕರೆದುಕೊಂಡು ಹೋಗಿ ಲಸಿಕೆಹಾಕಿಸಿಕೊಳ್ಳುವಂತೆ ಜಿಲ್ಲಾಡಳಿತ ಪ್ರಕಟಣೆಯಲ್ಲಿ ಮನವಿ ಮಾಡಿದೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: