ಮೈಸೂರು

ರೈತ ವಿರೋಧಿ ಕಾಯ್ದೆ ವಾಪಸ್ ಪಡೆಯುವಂತೆ ಒತ್ತಾಯಿಸಿ ರೈತರ ಉಪವಾಸ ಸತ್ಯಾಗ್ರಹ

ಮೈಸೂರು,ಜ.30:- ರೈತ ವಿರೋಧಿ ಕಾಯ್ದೆ ವಾಪಸ್ ಪಡೆಯುವಂತೆ ಒತ್ತಾಯಿಸಿ ರೈತರು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.

ಮೈಸೂರಿನ ಜಿಲ್ಲಾಧಿಕಾರಿಗಳ ಕಛೇರಿ ಬಳಿ ರೈತರು ಸಾಂಕೇತಿಕವಾಗಿ ಒಂದು ದಿನ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಮಹಾತ್ಮ ಗಾಂಧೀಜಿಯವರ ಭಾವಚಿತ್ರವಿಟ್ಟು ಉಪವಾಸ ಸತ್ಯಾಗ್ರಹವನ್ನು ರೈತರು ಆರಂಭಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಅವರ ಕರೆಯ ಮೇರೆಗೆ ಉಪವಾಸ ಸತ್ಯಾಗ್ರಹವನ್ನು ರೈತರು ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಈ ಕೂಡಲೇ ಕೈ ಬಿಡಬೇಕೆಂದು ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ದೆಹಲಿ ಗಲಭೆಗೆ ಕೇಂದ್ರ ಸರ್ಕಾರವೇ ಹೊಣೆ, ರೈತರ ಹೆಸರಿಗೆ ಮಸಿ ಬಳಿಯಲು ಷಡ್ಯಂತ್ರ ನಡೆಸಿದೆಯೆಂದು ರೈತರು ಆರೋಪಿಸಿದರು. ದೆಹಲಿಯಲ್ಲಿ ಗಲಭೆ ನಡೆಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಇದೇ ಸಂದರ್ಭದಲ್ಲಿ ಒತ್ತಾಯಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: