ಕರ್ನಾಟಕಪ್ರಮುಖ ಸುದ್ದಿ

ಮಹಾತ್ಮ ಗಾಂಧೀಜಿಗೆ ಗೌರವ ನಮನ ಸಲ್ಲಿಸಿದ ಸಿಎಂ ಬಿಎಸ್ವೈ

ಬೆಂಗಳೂರು,ಜ.30-ಮಹಾತ್ಮ ಗಾಂಧೀಜಿ ಅವರ 73 ನೇ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗಾಂಧಿ ಅವರಿಗೆ ಗೌರವ ಸಲ್ಲಿಸಿದರು.

ವಿಧಾನಸೌಧದ ಗಾಂಧೀ ಪ್ರತಿಮೆಯ ಮುಂಭಾಗ ಬಿಎಸ್‌ವೈ ಹಾಗೂ ಇತರ ಸಚಿವರು ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಿದರು. ಬಳಿಕ ಗಾಂಧೀ ಭಾವಾಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಬಿಎಸ್ವೈ ಅವರು, ಮಹಾತ್ಮ ಗಾಂಧಿ ದೇಶವನ್ನು ಬ್ರಿಟಿಷ್ ದಾಸ್ಯದಿಂದ ಮುಕ್ತಗೊಳಿಸುವುದರ ಜೊತೆಗೆ ಅಸ್ಪೃಶ್ಯತೆ ವಿರುದ್ಧ ಹೋರಾಡಿದರು. ಅವರ ತತ್ವ- ಸಿದ್ದಾಂತ ಪಾಲನೆ ಮಾಡುವುದೇ ನಿಜವಾಗಿ ಅವರಿಗೆ ಸಲ್ಲಿಸುವ ಗೌರವ ಎಂದರು. ಕಾರ್ಯಕ್ರಮದಲ್ಲಿ ಸಚಿವ ಆರ್‌. ಅಶೋಕ್ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇದೇ ವೇಳೆ ಕೆಪಿಸಿಸಿ ಕಚೇರಿಯಲ್ಲೂ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಈ ವೇಳೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರೀಖ್ ಅನ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ರಾಮಲಿಂಗಾರೆಡ್ಡಿ ಮತ್ತಿತರರು ಭಾಗವಹಿಸಿದ್ದರು. (ಎಂ.ಎನ್)

 

Leave a Reply

comments

Related Articles

error: