ಮೈಸೂರು

ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜು ಬಳಿ ಕಟ್ಟಡ ತ್ಯಾಜ್ಯ ಸುರಿಯಲು ಮುಂದಾದ ಪಾಲಿಕೆ : ಸ್ಥಳೀಯರ ಪ್ರತಿಭಟನೆ

ಮೈಸೂರು,ಫೆ.1:- ಸಾತಗಳ್ಳಿ- ಹಂಚ್ಯಾ ವ್ಯಾಪ್ತಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರದ ಸಮೀಪ ಕಟ್ಟಡ ತ್ಯಾಜ್ಯ ಸುರಿಯಲು ಮುಂದಾಗಿರುವ ನಗರಪಾಲಿಕೆ ನಡೆ ವಿರೋಧಿಸಿ ಹಾಗೂ ಈ ಜಾಗದಲ್ಲಿ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಿಸುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ಇಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪ್ರಾದೇಶಿಕ ಕಚೇರಿ ಸಮೀಪ ಜಮಾವಣೆಗೊಂಡ ಸ್ಥಳೀಯ ನಿವಾಸಿಗಳು ಹಾಗೂ ವಿದ್ಯಾರ್ಥಿಗಳು ಕ್ರೀಡಾ ಮೈದಾನದಲ್ಲಿ ಕಸ ಸುರಿಯುವುದಕ್ಕೆ ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾತ್ರವಲ್ಲದೆ ಸ್ಥಳದಲ್ಲೇ ಪ್ರತಿಭಟನೆ ಮಾಡಿದರು. ಸ್ಥಳೀಯರ ವಿರೋಧದ ಬಗ್ಗೆ ಮಾಧ್ಯಮಗಳ ವರದಿಯ ಬಳಿಕವೂ ಪಾಲಿಕೆ ಕಸ ಸುರಿಯಲು ಮುಂದಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯರು ವಾಹನಗಳನ್ನು ತಡೆದು, ರಸ್ತೆಯನ್ನೇ ಅಗೆದು ವಾಹನ ಹೋಗದಂತೆ ತಡೆದಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೃಹತ್ ಪ್ರತಿಭಟನೆ ಮಾಡಿ ಗಮನ ಸೆಳೆದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: