ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ 388 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆ

ರಾಜ್ಯ( ಬೆಂಗಳೂರು)ಫೆ.2:- ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, 388 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,39,775ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,220ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ 201 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,99,087ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ 470 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,21,592ಕ್ಕೆ ಏರಿಕೆಯಾಗಿದೆ. 5944 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 145 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

comments

Related Articles

error: