ಕರ್ನಾಟಕಪ್ರಮುಖ ಸುದ್ದಿ

ಸಿದ್ಧಗಂಗಾ ಶ್ರೀಗಳಿಗೆ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ ಪ್ರದಾನ

ತುಮಕೂರು : ಸಿದ್ಧಗಂಗಾ ಮಠದಲ್ಲಿ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾಯಕಯೋಗಿ ಶತಾಯುಷಿ ಶ್ರೀ ಶಿವಕುಮಾರ ಸ್ವಾಮಿಜಿಯವರಿಗೆ ರಾಜ್ಯ ಸರ್ಕಾರದ ವತಿಯಿಂದ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ಧಗಂಗಾ ಮಠಕ್ಕೆ ತೆರಳಿ ಸ್ವಾಮೀಜಿಯವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಚಿವರಾದ ಟಿ.ಬಿ. ಜಯಚಂದ್ರ, ಉಮಾಶ್ರೀ, ಸುರೇಶ್ ಗೌಡ ಸೇರಿದಂತೆ ಅನೇಕ ಮುಖಂಡರು ಈ ಸಂದರ್ಭ ಉಪಸ್ಥಿತರಿದ್ದರು.

ರಾಜ್ಯದಲ್ಲಿ ಅನುಪಮ ಸಮಾಜಿಕ ಸೇವೆ ಸಲ್ಲಿಸಿದವರನ್ನು ಗೌರವಿಸಲು ರಾಜ್ಯ ಸರ್ಕಾರವು ಇದೇ ಮೊದಲ ಬಾರಿಗೆ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ ನೀಡಲು ಆರಂಭಿಸಿದ್ದು, ಮೊದಲ ಬಾರಿಗೆ ಕಾಯಕಯೋಗಿ ಶ್ರೀ ಶಿವಕುಮಾರಸ್ವಾಮಿಜಿಯವರಿಗೆ ಪ್ರಶಸ್ತಿ ಸಂದಿರುವುದು ಅರ್ಥಪೂರ್ಣವಾಗಿದೆ ಎಂದೇ ಹೇಳಬಹುದು.

(ಎಸ್‍.ಎನ್‍/ಎನ್‍.ಬಿ.ಎನ್‍)

Leave a Reply

comments

Related Articles

error: