ಕರ್ನಾಟಕಪ್ರಮುಖ ಸುದ್ದಿ

ಕೆಪಿಸಿಸಿ ಅಧ್ಯಕ್ಷತೆ ಕುರಿತ ಸಭೆಗೆ ನನ್ನನ್ನೂ ಆಹ್ವಾನಿಸಿದ್ದಾರೆ : ಕೆ.ಎಚ್‍.ಮುನಿಯಪ್ಪ

ಬೆಂಗಳೂರು: ರಾಜ್ಯ ಕಾಂಗ್ರೆಸ್‍ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಹೊಸ ಸಾರಥಿ ನೇಮಿಸುವ ಪ್ರಕ್ರಿಯೆ ಚಾಲನೆ ಪಡೆದುಕೊಂಡಿದ್ದು, ಆಕಾಂಕ್ಷಿಗಳು ತುರುಸಿನ ರಾಜಕೀಯ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ.

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡರಲ್ಲಿ ಒಬ್ಬರಾದ ಕೆ.ಎಚ್. ಮುನಿಯಪ್ಪ ಅವರು ಈ ಬಗ್ಗೆ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೂ ಆಕಾಂಕ್ಷಿ. ಹೈಕಮಾಂಡ್ ನನ್ನನ್ನೂ ಪರಿಗಣಿಸುತ್ತದೆ ಎಂಬ ವಿಶ್ವಾಸವಿದೆ. ಅಧ್ಯಕ್ಷ ಸ್ಥಾನ ನೀಡಿದರೆ ಸಮರ್ಥವಾಗಿ ನಿಭಾಯಿಸುವೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

ಪಕ್ಷದಲ್ಲಿನ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುತ್ತೇನೆ. ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನ ಮತ್ತೆ ಅಧಿಕಾರಕ್ಕೆ ತರುತ್ತೇನೆ. ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರ ಜೊತೆ ಮಾತನಾಡಿದ್ದೇನೆ. ಇಂದು ರಾತ್ರಿ ನಡೆಯುವ ಸಭೆಗೆ ನನ್ನನ್ನೂ ನನ್ನನ್ನೂ ಆಹ್ವಾನಿಸಿದ್ದಾರೆ ಎಂದು ಮುನಿಯಪ್ಪ ತಿಳಿಸಿದ್ದಾರೆ.

(ಎಸ್‍.ಎನ್‍/ಎನ್‍.ಬಿ.ಎನ್‍)

Leave a Reply

comments

Related Articles

error: