ಮೈಸೂರು

ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿ : ಚಾಲಕ ಸಾವು

ಮೈಸೂರು,ಫೆ.4:- ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಪಲ್ಟಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರಿನ ಹೊರವಲಯದ ರಿಂಗ್ ರಸ್ತೆಯ ಬೋಗಾದಿ ಜಂಕ್ಷನ್ ಬಳಿ ನಡೆದಿದೆ.
ಮೃತರನ್ನು ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾಲಿ ಮೈಸೂರಿನಲ್ಲಿ ವಾಸವಿರುವ ನವೀನ್(34)ಎಂದು ಗುರುತಿಸಲಾಗಿದೆ. ಇವರು ಹಿನಕಲ್ ನಿಂದ ಶ್ರೀರಾಮಪುರಕ್ಕೆ ಹೋಗುತ್ತಿದ್ದಾಗ ಬೋಗಾದಿ ರಿಂಗ್ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಕಾರಿನ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದು, ಆಗ ಕಾರು ಪಲ್ಟಿಯಾಗಿದೆ. ಘಟನೆಯಿಂದ ನವೀನ್ ಗಂಭೀರ ಗಾಯಗೊಂಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಕೆ.ಆರ್.ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: