ಕ್ರೀಡೆದೇಶಪ್ರಮುಖ ಸುದ್ದಿ

ತಂಡದ ಸಭೆಯಲ್ಲಿ ಸಂಕ್ಷಿಪ್ತವಾಗಿ ಚರ್ಚಿಸಿದ್ದೇವೆ : ವಿರಾಟ್ ಕೊಯ್ಲಿ

ದೇಶ(ನವದೆಹಲಿ)ಫೆ.5:- ಕೇಂದ್ರದ ಮೂರು ಕೃಷಿ ಕಾಯ್ದೆ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತು ತಂಡದ ಸಭೆಯಲ್ಲಿ ಚರ್ಚೆಯಾಗಿದ್ದು ಎಲ್ಲರೂ ತಮ್ಮ ಅಭಿಪ್ರಾಯಗಳನ್ನ ವ್ಯಕ್ತಪಡಿಸಿದ್ದಾರೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಚೆನ್ನೈನಲ್ಲಿ ಇಂದಿನಿಂದ ಭಾರತ-ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದ್ದು ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ವರ್ಚುವಲ್ ಮೂಲಕ ಮಾತನಾಡಿದ ಕೊಹ್ಲಿ ನಾವು ತಂಡದ ಸಭೆಯಲ್ಲಿ ಸಂಕ್ಷಿಪ್ತವಾಗಿ ಚರ್ಚಿಸಿದ್ದೇವೆ. ಎಲ್ಲರೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು ಎಂದಿದ್ದಾರೆ.

ದೆಹಲಿಯ ಗಡಿಯಲ್ಲಿ ರೈತರು ಕಳೆದ ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದು ಈ ಬಗ್ಗೆ ಕೇಳಿದಾಗ ಉತ್ತರಿಸಿದ ಕೊಹ್ಲಿ ಅದರ ಬಗ್ಗೆ ತಂಡದ ಸಭೆಯಲ್ಲಿ ಸಂಕ್ಷಿಪ್ತವಾಗಿ ಚರ್ಚಿಸಲಾಯಿತು. ಎಲ್ಲರೂ ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: