ಮೈಸೂರು

ಮಂಡ್ಯ, ರಾಮನಗರ, ಬೆಂಗಳೂರು ಜಿಲ್ಲೆಗಳಲ್ಲಿ ಲಘು ಭೂಕಂಪನ

ಬೆಂಗಳೂರು, ರಾಮನಗರ, ಮಂಡ್ಯ ಜಿಲ್ಲೆಗಳು ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಗೊಂಡು ಮನೆಯಿಂದ ಹೊರಬಂದಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಮಂಡ್ಯ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಮದ್ದೂರು ತಾಲೂಕಿನ ಮರಳಿಗ, ವಳಗೆರೆಹಳ್ಳಿ, ಬೆಸಗರಗಳ್ಳಿ ಗ್ರಾಮಗಳು, ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶ,  ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರ, ಸತ್ಯಗಾಲಗಳಲ್ಲೂ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನತೆ ಆತಂಕಗೊಂಡಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ, ರಾಜರಾಜೇಶ್ವರಿ ನಗರ, ಯಲಹಂಕ, ಕೆಂಗೇರಿ, ಮಾಗಡಿ ಸೇರಿದಂತೆ ಹಲವೆಡೆ ಭೂಕಂಪನದ ಅನುಭವವಾಗಿದೆ. ರಾಮನಗರದ ಚೆನ್ನಪಟ್ಟಣ, ಕನಕಪುರಗಳಲ್ಲೂ ಸಹ ಮುಂಜಾನೆ 2 ರಿಂದ 3 ಸೆಕೆಂಡ್ ಭೂಮಿ ಕಂಪಿಸಿದೆ.

ಭೂಮಿ ಕಂಪಿಸುತ್ತಿದ್ದಂತೆ ಮನೆಯಲ್ಲಿದ್ದ ವಸ್ತುಗಳು ನೆಲಕ್ಕೆ ಬಿದ್ದಿವೆ. ಗೋಡೆಗಳು ಬಿರುಕು ಬಿಟ್ಟಿದ್ದು  ಗಾಬರಿಗೊಂಡ  ಜನರು ಮನೆಯಿಂದ ಹೊರ ಓಡಿ ಬಂದಿದ್ದಾರೆ.  ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ. (ಎಲ್.ಜಿ-ಎಸ್.ಎಚ್)

Leave a Reply

comments

Related Articles

error: