ಕ್ರೀಡೆಪ್ರಮುಖ ಸುದ್ದಿ

ಗಾಯದಿಂದ ಚೇತರಿಸಿಕೊಂಡಿರುವ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ : ಎರಡನೇ ಟೆಸ್ಟ್ ನಲ್ಲಿ ಕಣಕ್ಕಿಳಿಯುವ ಸಾಧ್ಯತೆ

ದೇಶ( ನವದೆಹಲಿ)ಫೆ.11:- ಗಾಯದಿಂದ ಚೇತರಿಸಿಕೊಂಡಿರುವ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ನೆಟ್ಸ್‌ ಅಭ್ಯಾಸಕ್ಕೆ ಮರಳಿದ್ದಾರೆ.
ಶನಿವಾರದಿಂದ ಇಂಗ್ಲೆಂಡ್ ವಿರುದ್ಧ ಚೆನ್ನೈನಲ್ಲಿ ನಡೆಯಲಿರುವ ಎರಡನೇ ಟೆಸ್ಟ್‌ನಲ್ಲಿ ಅಕ್ಷರ್ ಕಣಕ್ಕಿಳಿಯುವ ಸಾಧ್ಯತೆ ಇದೆ. ಮೊದಲ ಪಂದ್ಯದಲ್ಲಿ ವೈಫಲ್ಯ ಅನುಭವಿಸಿದ ಶಹಬಾಜ್ ನದೀಮ್ ಬೆಂಚ್‌ಗೆ ಮರಳುವುದು ಬಹುತೇಕ ಖಚಿತವಾಗಿದೆ. 38 ಅಂತರರಾಷ್ಟ್ರೀಯ ಏಕದಿನ ಮತ್ತು 11 ಟ್ವಿಂಟಿ20 ಪಂದ್ಯಗಳನ್ನು ಆಡಿರುವ ಗುಜರಾತಿನ ಅಕ್ಷರ್ ಟೆಸ್ಟ್ ಪಾದಾರ್ಪಣೆಗೆ ಕಾದಿದ್ದಾರೆ.

ಅಕ್ಷರ್ ಅವರಿಗೆ ಮೊಣಕಾಲಿನ ನೋವಿತ್ತು. ಇದೀಗ ಅವರು ಚೇತರಿಸಿಕೊಂಡಿದ್ದಾರೆ. ನೆಟ್ಸ್ ‌ನಲ್ಲಿ ಬ್ಯಾಟಿಂಗ್ ಕೂಡ ಮಾಡುತ್ತಿದ್ದಾರೆ. ಮುಂದಿನ ಒಂದೆರಡು ದಿನಗಳಲ್ಲಿ ಬೌಲಿಂಗ್ ಆರಂಭಿಸುವ ಸಾಧ್ಯತೆ ಇದೆ’ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ಧಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: