ಸುದ್ದಿ ಸಂಕ್ಷಿಪ್ತ
ಫೆ.12ರಂದು ವಿಚಾರ ಸಂಕಿರಣ
ಮೈಸೂರು,ಫೆ.11-ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ ವತಿಯಿಂದ ಹುಣಸೂರು ತಾಲ್ಲೂಕಿನ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಫೆ.12ರಂದು ಬೆಳಿಗ್ಗೆ 10.30 ಗಂಟೆಗೆ `ಚಾರಿತ್ರಿಕ ದಾಖಲೆಗಳ ಮಹತ್ವ ಮತ್ತು ಉಪಯೋಗ’ ಎಂಬ ವಿಷಯದ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಶಾಸಕರಾದ ಹೆಚ್.ಪಿ.ಮಂಜುನಾಥ್ ಅವರು ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲರಾದ ಜ್ಞಾನಪ್ರಕಾಶ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹುಣಸೂರು ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಎಂ.ಎನ್)