ಸುದ್ದಿ ಸಂಕ್ಷಿಪ್ತ
ಶಿಷ್ಯ ವೇತನಕ್ಕಾಗಿ ಅರ್ಜಿ ಆಹ್ವಾನ
ಮೈಸೂರು,ಫೆ.11-ಕೆ.ಆರ್ ನಗರ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2020-21ನೇ ಸಾಲಿಗೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು www.ssp.postmatric.karnataka.gov.in ವೆಬ್ಸೈಟ್ ಮೂಲಕ ಮಾರ್ಚ್ 5ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ: 080-35254757 ಗೆ ಕರೆ ಮಾಡಬಹುದು ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಎಂ.ಎನ್)