ಕರ್ನಾಟಕಪ್ರಮುಖ ಸುದ್ದಿ

ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 15 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸಿಸಿಬಿ ವಶಕ್ಕೆ

ಬೆಂಗಳೂರು,ಫೆ.13-ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಬಂಧಿತರಿಂದ ಬರೋಬ್ಬರಿ 15 ಲಕ್ಷ ರೂ. ಮೌಲ್ಯದ ಕೊಕೇನ್ ಹಾಗೂ ಎಕ್ಸ್ಟಸಿ ವಶಪಡಿಸಿಕೊಂಡಿದ್ದಾರೆ.

ಮೂಲತಃ ನೈಜಿರೀಯನ್ ದೇಶದವರಾದ ವಿನ್ಸೆಂಟ್ ಹಾಗೂ ಜಾನ್ ಬಂಧಿತ ಆರೋಪಿಗಳು. ಸದ್ಯ ಸಿಸಿಬಿ ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳು ವಿಸಾ ಅವಧಿ ಮುಗಿದಿದ್ದರೂ ನಗರದಲ್ಲಿ ವಾಸ ಮಾಡುತ್ತಾ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದರು. ಖಿಚಿತ ಮಾಹಿತಿ ಮೇರೆಗೆ ಇಬ್ಬರನ್ನು ಬಂಧಿಸಲಾಗಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಡ್ರಗ್ಸ್‌ ಮಾಫಿಯಾ ದಿನದಿಂದ ದಿನಕ್ಕೆ ಪತ್ತೆಯಾಗುತ್ತಲೇ ಇದೆ. ಅದರಲ್ಲೂ ಅಂತರಾಷ್ಟ್ರೀಯ ಡ್ರಗ್ಸ್ ಜಾಲ ಬೆಂಗಳೂರಿನಲ್ಲಿ ಸಕ್ರಿಯವಾಗಿದೆ. ಇತ್ತ ಪೊಲೀಸರು ಕೂಡ ಡ್ರಗ್ಸ್‌ ದಂಧೆಕೋರರ ಹೆಡೆಮುರಿ ಕಟ್ಟುತ್ತಿದ್ದಾರೆ. ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಿಸಿಬಿ ಹೈ ಅಲರ್ಟ್‌ ಆಗಿದೆ. (ಎಂ.ಎನ್)

Leave a Reply

comments

Related Articles

error: