ಕ್ರೀಡೆದೇಶಪ್ರಮುಖ ಸುದ್ದಿ

ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಬೌಲಿಂಗ್ ದಾಳಿಗೆ ಕುಸಿದ ಇಂಗ್ಲೆಂಡ್

ದೇಶ( ಚೆನ್ನೈ)ಫೆ.15:- ಇಂಗ್ಲೆಂಡ್ ಟೀಂ ಇಂಡಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿತ್ತು. ಇದೀಗ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಬೌಲಿಂಗ್ ದಾಳಿಗೆ ಕುಸಿದಿದ್ದು, ಭಾರತ 195 ರನ್ ಗಳ ಮುನ್ನಡೆ ಪಡೆದಿದೆ.

ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 329 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಇಂಗ್ಲೆಂಡ್ 134 ರನ್ ಗಳಿಗೆ ಆಲೌಟ್ ಆಗಿದೆ.

195 ರನ್ ಗಳ ಮುನ್ನಡೆ ಸಾಧಿಸಿರುವ ಭಾರತ ಬ್ಯಾಟಿಂಗ್ ಆರಂಭಿಸಿದೆ. ಆರಂಭಿಕರಾದ ರೋಹಿತ್ ಶರ್ಮಾ ಶುಭ್ಮನ್ ಗಿಲ್ ಸ್ಫೋಟಕ ಬ್ಯಾಟಿಂಗ್ ನಡೆಸಿದರು.

ರವಿಚಂದ್ರನ್ ಅಶ್ವಿನ್ ಮಾರಕ ಬೌಲಿಂಗ್ ದಾಳಿಗೆ ಇಂಗ್ಲೆಂಡ್ ಬ್ಯಾಟ್ಸ್ ಮನ್ ಗಳು ತತ್ತರಿಸಿ ಪೆವಿಲಿಯನ್ ಪರೇಡ್ ನಡೆಸಿದರು. ಬೆನ್ ಪೋಕ್ಸ್ ಬಿಟ್ಟರೆ ಮತ್ತೆಲ್ಲಾ ಬ್ಯಾಟ್ಸ್ ಮನ್ ಗಳು ಅಲ್ಪಮೊತ್ತಕ್ಕೆ ಔಟ್ ಆಗಿದ್ದಾರೆ.

ಇಂಗ್ಲೆಂಡ್ ಪರ ಸಿಬ್ಲಿ 16, ಬೆನ್ ಸ್ಟೋಕ್ಸ್ 18, ಒಲ್ಲಿ ಪೊಪೆ 22, ಬೆನ್ ಪೋಕ್ಸ್ ಅಜೇಯ 42 ರನ್ ಬಾರಿಸಿದ್ದಾರೆ. ಭಾರತ ಪರ ಬೌಲಿಂಗ್ ನಲ್ಲಿ ಅಶ್ವಿನ್ 5, ಇಶಾಂತ್ ಶರ್ಮಾ ಮತ್ತು ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: