ಪ್ರಮುಖ ಸುದ್ದಿಮೈಸೂರು

ಸಮುದಾಯಗಳು ಮೀಸಲಾತಿ ಕೇಳುವುದರಲ್ಲಿ ತಪ್ಪೇನಿಲ್ಲ : ಬಿ.ವೈ ವಿಜಯೇಂದ್ರ

ಮೈಸೂರು.ಫೆ.15:- ಸಮುದಾಯಗಳು ಮೀಸಲಾತಿ ಕೇಳುವುದರಲ್ಲಿ ತಪ್ಪೇನಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಂದು ಜಾತಿಗೆ ಸೀಮಿತ ವಾಗದೆ ಎಲ್ಲ ಸಮುದಾಯಗಳ ಸಮಸ್ಯೆಗಳಿಗೆ ಸ್ಪಂದಿಸು ತ್ತಿದ್ದು, ಈಗಲೂ ಸಮುದಾಯದ ಬೇಡಿಕೆಗಳಿಗೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ನಿನ್ನೆ ನಗರದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದಿಂದ ಆಯೋಜಿಸಿದ್ದ ಮಹಾಸಭಾ ಭವನದ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಮ್ಮ ಸಮುದಾಯಕ್ಕೆ ಮಾರ್ಗದರ್ಶನ ಮಾಡಿ ದಿಕ್ಕು ತೋರಿದ್ದು ಸಿದ್ಧಗಂಗಾ ಹಾಗೂ ಸುತ್ತೂರು ಶ್ರೀಗಳು. ಅವರ ಮಾರ್ಗದರ್ಶನದಲ್ಲೇ ಹೋರಾಟಗಳು ನಡೆಯಬೇಕು. ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೋರಾಟದ ನಾಯಕತ್ವ ವಹಿಸಬೇಕು. ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗೆ ಮಾರ್ಗದರ್ಶನ ಮಾಡಬೇಕು ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: