ಸುದ್ದಿ ಸಂಕ್ಷಿಪ್ತ

ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮೈಸೂರು, ಫೆ .15 :- ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿ ವತಿಯಿಂದ 2020-21ನೇ ಸಾಲಿನಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಗೆ “ಬಾಲಗೌರವ ಪ್ರಶಸ್ತಿ’ ಪ್ರದಾನ ಮಾಡಲು ಉದ್ದೇಶಿಸಲಾಗಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮಕ್ಕಳು ಸಂಗೀತ, ನೃತ್ಯ, ನಟನೆ, ಕ್ರೀಡೆ ಮತ್ತು ಚಿತ್ರಕಲೆ, ಕರಕುಶಲ, ಬರವಣಿಗೆ, ಸಂಶೋಧನೆ (ಹೊಸ ಆವಿಷ್ಕಾರ) ಈ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಗೈದು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಪುರಸ್ಕೃತ ಮಗುವಾಗಿರಬೇಕು.ಇಂತಹ ಮಕ್ಕಳು `ಅಕಾಡೆಮಿ ಬಾಲ ಗೌರವಪ್ರಶಸ್ತಿ’ ಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವ-ವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು 2021ರ ಫೆಬ್ರವರಿ 20ರೊಳಗಾಗಿ ಧಾರವಾಡದ ಚಂದ್ರಿಕಾ ಲೇಔಟ್ ಹಿಂಭಾಗದ ಕೆ.ಎಚ್.ಬಿ ಕಾಲೋನಿಯಲ್ಲಿರುವ ಕಚೇರಿಗೆ ಕಳುಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2461666 ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: