ದೇಶಪ್ರಮುಖ ಸುದ್ದಿ

ಮುಂದಿನ 2-3 ವಾರಗಳಲ್ಲಿ 50 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೋವಿಡ್-19 ಲಸಿಕೆ ನೀಡಲಾಗುವುದು : ಸಚಿವ ಹರ್ಷವರ್ಧನ್

ದೇಶ( ನವದೆಹಲಿ)ಫೆ.16:- ದೇಶದಲ್ಲಿ ಕೋವಿಡ್ -19 ವಿರುದ್ಧ ಸುಮಾರು 18 ರಿಂದ 19 ಲಸಿಕೆಗಳು ಸಿದ್ಧವಾಗುತ್ತಿದ್ದು, ಅವು ಕ್ಲಿನಿಕಲ್ ಪ್ರಯೋಗದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಮುಂದಿನ 2-3 ವಾರಗಳಲ್ಲಿ 50 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೋವಿಡ್-19 ಲಸಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಭಾರತದಿಂದ 20 ರಿಂದ 25 ದೇಶಗಳಿಗೆ ಕೊರೋನಾ ಲಸಿಕೆಯನ್ನು ಸರಬರಾಜು ಮಾಡುವ ಯೋಜನೆ ಇದೆ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ಕಳೆದ ಏಳು ದಿನಗಳಿಂದ 188 ಜಿಲ್ಲೆಗಳಲ್ಲಿ ಯಾವುದೇ ಹೊಸ ಕೊರೋನಾ ಪ್ರಕರಣಗಳು ದಾಖಲಾಗಿಲ್ಲ. 21 ದಿನಗಳಿಂದ 21 ಜಿಲ್ಲೆಗಳಲ್ಲಿ ಶೂನ್ಯ ಕೊರೋನಾ ಪ್ರಕರಣ ದಾಖಲಾಗಿದೆ ಎಂದರು. ಆದರೆ ಕೊರೋನಾ ಸೋಂಕು ತಗ್ಗುತ್ತಿದೆ ಎಂದು ಮೈ ಮರೆಯಬೇಡಿ. ಕೊರೋನಾ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಿ ಎಂದು ಸಚಿವರು ಮನವಿ ಮಾಡಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: