ಕರ್ನಾಟಕಪ್ರಮುಖ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಗಳ ಆರತಕ್ಷತೆಗೆ ರಾಹುಲ್ ಗಾಂಧಿ-ಪ್ರಿಯಾಂಕಾ ವಾದ್ರಾ ಆಗಮನ ಸಾಧ್ಯತೆ

ರಾಜ್ಯ( ಬೆಂಗಳೂರು)ಫೆ.17:- ಕೆಪಿಸಿಸಿ ಅಧ್ಯಕ್ಷ ಡಿ.ಕೆ‌. ಶಿವಕುಮಾರ್ ಪುತ್ರಿ ಐಶ್ವರ್ಯಾ ಮತ್ತು ಕೆಫೆ ಕಾಫಿಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ ಪುತ್ರ, ಎಸ್.ಎಂ. ಕೃಷ್ಣ ಮೊಮ್ಮಗ ಅಮರ್ತ್ಯ ಹೆಗ್ಡೆ ವಿವಾಹ ಆರತಕ್ಷತೆ ನಗರದ ಹೊರವಲಯದ ಪ್ರೆಸ್ಟೀಜ್‌ ಗಾಲ್ಫ್‌ಶೆಯರ್‌ ರೆಸಾರ್ಟ್‌ನಲ್ಲಿ ಇಂದು ನಡೆಯಲಿದೆ.
ಎಐಐಸಿ ನಾಯಕರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಗುಲಾಂ ನಬಿ ಆಜಾದ್‌, ಕೆ.ಸಿ. ವೇಣುಗೋಪಾಲ್‌, ಪುದುಚೇರಿ ಮುಖ್ಯಮಂತ್ರಿ ನಾರಾಯಣಸ್ವಾಮಿ, ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ, ಕೇರಳದ ಕಾಂಗ್ರೆಸ್ ನಾಯಕರಾದ ಉಮ್ಮನ್‌ಚಾಂಡಿ, ರಮೇಶ ಚೆನ್ನಿತಲ ಮತ್ತಿತರ ಪ್ರಮುಖರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

ದೆಹಲಿಯಿಂದ ಬುಧವಾರ ಸಂಜೆ ನಗರಕ್ಕೆ ಬರಲಿರುವ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಪ್ರಮುಖ ನಾಯಕರು, ದೇವನಹಳ್ಳಿಯಲ್ಲಿರುವ ತಾಜ್‌ ಹೋಟೆಲ್‌ನಲ್ಲಿ ತಂಗಲಿದ್ದಾರೆ. ಅಲ್ಲಿಂದಲೇ ಗುರುವಾರ ಬೆಳಿಗ್ಗೆ ದೆಹಲಿಗೆ ಮರಳಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: