ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ 406 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ರಾಜ್ಯ( ಬೆಂಗಳೂರು)ಫೆ.19:- ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು 406 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,46,860ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಆರು ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,282ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ 256 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,03,027ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ ನಾಲ್ವರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ 306 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,28,767ಕ್ಕೆ ಏರಿಕೆಯಾಗಿದೆ. 5792 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 125 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

comments

Related Articles

error: