ಮೈಸೂರು

ವಿದ್ಯುತ್ ಶಾಕ್ ತಗುಲಿ ಮಹಿಳೆ ಸಾವು

ಮನೆ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯೋರ್ವರಿಗೆ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೃತಮಹಿಳೆಯನ್ನು ಗಾಂಧಿನಗರ ನಿವಾಸಿ ಮಲ್ಲಿಕಾರ್ಜುನಮ್ಮ (60 ) ಎಂದು ಗುರುತಿಸಲಾಗಿದೆ. ಗಾಂಧಿನಗರದ 5 ನೇ ಕ್ರಾಸ್ ನಲ್ಲಿರುವ ಮನೆಯೊಂದರಲ್ಲಿ ಮನೆ ಕೆಲಸ ಮಾಡುತ್ತಿದ್ದ ಮಲ್ಲಿಕಾರ್ಜುನಮ್ಮ ಮಾಲೀಕರ ಮನೆಯಲ್ಲಿ ಬಟ್ಟೆ ತೊಳೆದು ಟೆರಸ್ ಮೇಲೆ ಬಟ್ಟೆ ಒಣಹಾಕಲು ತೆರಳಿದ್ದಾಗ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಎನ್.ಆರ್.ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: