ಮೈಸೂರು

ಹಲ್ಲೆ ಪ್ರಕರಣ : ತಂದೆ ವಿರುದ್ಧ ಮಗನಿಂದ ದೂರು ದಾಖಲು

ಕ್ಷುಲ್ಲಕ ಕಾರಣಕ್ಕೋಸ್ಕರ ಸೊಸೆಯ ಹಾಗೂ ಮಗನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಸ್ವತಃ ಮಗನೇ ತನ್ನ ತಂದೆಯ ವಿರುದ್ಧ ದೂರು ದಾಖಲಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಇಲ್ಲಿನ ಕೆ.ಜಿ.ಕೊಪ್ಪಲು ನಿವಾಸಿ ಪುನೀತ್ ತನ್ನ ತಂದೆ ಶ್ರೀಕಂಠ ಹಾಗೂ ಮಲತಾಯಿ ಯಶೋದ ಅವರ ವಿರುದ್ಧ ದೂರು ದಾಖಲಿದ್ದಾರೆ. ಏ.10ರಂದು ಪುನೀತ್ ಮನೆಯ ಮೇಲಿನ ಮಹಡಿಯಲ್ಲಿ ಮಲಗಿದ್ದಾಗ ಅವರ ಪತ್ನಿ ಮನೆಯ ಕೆಳಗಡೆಯ ಹಾಲ್ ನಲ್ಲಿ ಜೋರಾಗಿ ಅಳುತ್ತಿರುವುದು ಕೇಳಿಸಿತು. ಕೂಡಲೇ ಸ್ಥಳಕ್ಕೆ ತೆರಳಿದ ಪುನೀತ್ ತನ್ನ ತಂದೆ ಮತ್ತು ಮಲತಾಯಿ ಪತ್ನಿಯ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ನೋಡಿದ್ದಾರೆ. ಈ ಕುರಿತು ತಂದೆಯನ್ನು ಪ್ರಶ್ನಿಸಿದಾಗ ಅವಾಚ್ಯ ಶಬ್ದಗಳಿಂದ ಅವರನ್ನು  ನಿಂದಿಸಿ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಕುರಿತು ಸರಸ್ವತಿಪುರಂ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: