ಮೈಸೂರು

ಕೇರಳದಲ್ಲಿ ಕೊರೋನಾ ಪ್ರಕರಣ ಹೆಚ್ಚಿದ ಹಿನ್ನೆಲೆ : ಮೈಸೂರು ಜಿಲ್ಲೆಯ ಗಡಿ ಭಾಗದಲ್ಲಿ ಹೈ ಅಲರ್ಟ್

ಮೈಸೂರು,ಫೆ.20:-  ಕೇರಳದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೇರಳ-ಮೈಸೂರು ಜಿಲ್ಲೆ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್‌ ನಲ್ಲಿ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೇರಳದಿಂದ ಬರುವ ಎಲ್ಲ ಪ್ರಯಾಣಿಕರ ತಪಾಸಣೆ ಮಾಡಲಾಗುತ್ತಿದ್ದು, ಅಧಿಕಾರಿಗಳಿಂದ ಕೋವಿಡ್‌ ಪರೀಕ್ಷೆ ವರದಿ ಪರಿಶೀಲಿಸಲಾಗುತ್ತಿದೆ.

ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸೇಷನ್ ಮಾಡಲಾಗುತ್ತಿದ್ದು, ಕೋವಿಡ್ ಟೆಸ್ಟ್ ಮಾಡಿಸಿರುವ ಬಗ್ಗೆಯೂ ತಪಾಸಣೆ ಮಾಡಲಾಗುತ್ತಿದೆ. ಬಸ್ ಹಾಗೂ ವಿಮಾನದ ಮೂಲಕ ಮೈಸೂರಿಗೆ ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಕೇರಳದಿಂದ ಪ್ರತಿದಿನ ಒಂದು ವಿಮಾನ ಮೈಸೂರಿಗೆ ಹಾರಾಟ ನಡೆಸುತ್ತಿದ್ದು, ದಿನಕ್ಕೆ ಸರಾಸರಿ 55 ಪ್ರಯಾಣಿಕರು ವಿಮಾನದ ಮೂಲಕ ಆಗಮಿಸುತ್ತಿದ್ದಾರೆ. ಹೀಗಾಗಿ  ಪ್ರಯಾಣಿಕರ ಮೇಲೆ ನಿಗಾವಹಿಸಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: