ಮೈಸೂರು

ಗ್ರಾಮ ವಾಸ್ತವ್ಯ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ ಶಾಸಕ ಅಶ್ವಿನ್ ಕುಮಾರ್

ಮೈಸೂರು,ಫೆ.20:-  ತಹಶೀಲ್ದಾರ್ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಒಂದು ದಿನದ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿದ್ದು, ತಾಲೂಕು ಕಂದಾಯ ಇಲಾಖೆ ವತಿಯಿಂದ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ತೀ.ನರಸೀಪುರ ತಾಲೂಕಿನ ವಡ್ಡರಕೊಪ್ಪಲು ಗ್ರಾಮದಲ್ಲಿ   ಅಧಿಕಾರಿಗಳು ಗ್ರಾಮವಾಸ್ತವ್ಯ ಹೂಡಿದ್ದು, ಗಿಡ ನೆಟ್ಟು ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ    ಶಾಸಕ ಎಂ. ಅಶ್ವಿನ್ ಕುಮಾರ್ ಚಾಲನೆ ನೀಡಿದರು. ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಶಾಸಕ   ಎಂ.ಅಶ್ವಿನ್ ಕುಮಾರ್ ಕೂಡ ಇದ್ದು ಗ್ರಾಮದ ಪ್ರಮುಖ ರಸ್ತೆಗಳಲ್ಲಿ  ತೆರಳಿ ಜನರ ಸಮಸ್ಯೆ ಆಲಿಸಿದರು.

ವಡ್ಡರಕೊಪ್ಪಲು ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ವಹಣೆ ಸರಿಯಿಲ್ಲ ಎಂದು   ಗ್ರಾಮಸ್ಥರು ದೂರು ನೀಡಿದರು. ಗ್ರಾಮಸ್ಥರ ದೂರಿಗೆ ಸ್ಥಳದಲ್ಲೇ ಸಮಸ್ಯೆ ಬಗೆಹರಿಸುವಂತೆ   ಶಾಸಕ ಎಂ. ಅಶ್ವಿನ್ ಕುಮಾರ್ ಸೂಚನೆ ನೀಡಿದರು. ಗ್ರಾಮವಾಸ್ತವ್ಯ ಕಾರ್ಯಕ್ರಮ ಒಳ್ಳೆಯ ಬೆಳವಣಿಗೆ. ಗಿಡ ಮರವಾಗಿ ಬೆಳೆದು ಉತ್ತಮ ಫಲ ನೀಡುವಂತೆ ಎಲ್ಲಾ ಅಧಿಕಾರಿಗಳು ಒಂದೇ ಕಡೆ ಸೇರಿ ಗ್ರಾಮಗಳಲ್ಲಿ ಇರುವ ಸಮಸ್ಯೆ ಬಗೆಹರಿಸಲು ಅನುಕೂಲವಾಗುತ್ತದೆ. ಗ್ರಾಮವಾಸ್ತವ್ಯ ಕಾರ್ಯಕ್ರಮ ಕೂಡ ಯಶಸ್ವಿಯಾಗಲಿ ಎಂದು ಶುಭ ಕೋರಿದರು.

ಈ ಸಂದರ್ಭ ಚುನಾಯಿತ ಜನಪ್ರತಿನಿಧಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: