ಮೈಸೂರು

ಸರ್ವಜ್ಞ ಇಂದಿಗೂ ಜೀವಂತ : ಶಾಸಕ ಎಲ್.ನಾಗೇಂದ್ರ

ಮೈಸೂರು,ಫೆ .20:- 17ನೇ ಶತಮಾನದ ಸಂತಕವಿ ಸರ್ವಜ್ಞ ಅವರು ಇಂದಿಗೂ ಜೀವಂತವಾಗಿದ್ದಾರೆ ಎಂದರೆ ಅವರು ಸಮಾಜಕ್ಕೆ ನೀಡಿದ ಕೊಡುಗೆ, ವಿಚಾರಧಾರೆಗಳೇ ಪ್ರಮುಖ ಕಾರಣ. ವಿಶ್ವವೇ ಇಂದು ಭಾರತವನ್ನು ಗುರುತಿಸುತ್ತಿದ್ದರೆ ಇಂತಹ ಮಹನೀಯರಿಂದಲೇ ಎಂದು ಶಾಸಕ ಎಲ್.ನಾಗೇಂದ್ರ ಅವರು ಹೇಳಿದರು.
ಮೈಸೂರಿನ ಕಲಾಮಂದಿರದ ಮನೆಯಂಗಳದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಶನಿವಾರ ಏರ್ಪಡಿಸಿದ್ದ ಸಂತಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸರ್ವಜ್ಞ ಅವರ ಭಾವಚಿತ್ರಕ್ಕೆ ಪುರ್ಷ್ಪಾಚನೆ ಮಾಡಿ ಮಾತನಾಡಿದರು.
ನಮ್ಮ ಭಾರತದ ಸಂಸ್ಕೃತಿ ಹಾಗೂ ಹಿನ್ನೆಲೆಯನ್ನು ನೋಡಿದಾಗ ಕವಿ ಸಂತತಿ ನಮ್ಮ ಭಾರತದಲ್ಲೇ ಇದೆ. ಎಲ್ಲಾ ಮಹನಿಯರ ವಿಚಾರವನ್ನು ತೆಗೆದುಕೊಂಡರೆ ಸಾಹಿತ್ಯ ಲೋಕಕ್ಕೆ ಅವರು ನೀಡಿದ ಕೊಡುಗೆ ಅಪಾರ. ಇಂತಹ ಮಹನೀಯರ ಜಯಂತಿಯನ್ನು ಆಚರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.
ಕುಂಬಾರವೃತ್ತಿ ಇಂದು ಪಟ್ಟಣಗಳಲ್ಲಿ ನಶಿಸಿದ್ದು, ಹಳ್ಳಿಗಳಲ್ಲಿ ಇಂದಿಗೂ ಜೀವಂತವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆತ್ಮ ನಿರ್ಭರ್ ಭಾರತ್ ಯೋಜನೆ ಮೂಲಕ ಸಣ್ಣ ಹಾಗೂ ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದು ಹೇಳಿದರು.
ಕುಂಬಾರ ಸಮಾಜದಿಂದ ನಿರ್ಮಾಣವಾಗುತ್ತಿರುವ ಕಟ್ಟಡಕ್ಕೆ 10 ಲಕ್ಷ ಬಿಡುಗಡೆ ಮಾಡುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಫಣೀಶ್, ಮೈಸೂರು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಮಹದೇವಸ್ವಾಮಿ, ಮೈಸೂರು ಮಹಾನಗರ ಪಾಲಿಕೆ ಸದಸ್ಯೆ ಉಷಾ, ಕುಂಬಾರ ಸಂಘದ ಮುಖಂಡ ಪ್ರಕಾಶ್, ಎಂ.ಪಿ. ವರ್ಷಾ, ಮೈಸೂರು ನಗರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕೆ. ಎಸ್. ಶಿವರಾಮ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಹೆಚ್.ಚೆನ್ನಪ ಸೇರಿದಂತೆ ಇತರರು ಹಾಜರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: