ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ 2ಸಾವಿರಕ್ಕೂ ಹೆಚ್ಚು ವೈದ್ಯರನ್ನು ಸರ್ಕಾರದಿಂದ ನೇರ ನೇಮಕಾತಿ ಮಾಡಲಾಗುವುದು : ಸಚಿವ ಸುಧಾಕರ್

ರಾಜ್ಯ( ಕಲಬುರಗಿ)ಫೆ.22:- ಪ್ರಸ್ತುತ ರಾಜ್ಯದ ಎಲ್ಲಾ 21 ಸರ್ಕಾರಿ ವೈದ್ಯಕೀಯ ಸಂಸ್ಥೆಗಳನ್ನು ಉನ್ನತಮಟ್ಟಕ್ಕೇರಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಇಲ್ಲಿನ ಸೇಡಂ ರಸ್ತೆಯಲ್ಲಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕರ್ನಾಟಕ ಪ್ರಾದೇಶಿಕ ಕೇಂದ್ರದ ಹೊಸ ಆಡಳಿತ ಕಟ್ಟಡವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿ ನಿಜವಾದ ಕಲ್ಯಾಣವೆಂಬ ಅರ್ಥಕ್ಕೆ ಮತ್ತಷ್ಟು ಬಲವನ್ನು ಈ ಕಟ್ಟಡ ನೀಡಿದೆ. ಹಿಂದುಳಿದ, ಅಭಿವೃದ್ಧಿ ವಂಚಿತ ಎಂದು ಕರೆಸಿಕೊಳ್ಳುತ್ತಿದ್ದ ಹೈದ್ರಾಬಾದ್ ಕರ್ನಾಟಕ ಪ್ರದೇಶ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾಯಕಲ್ಪದಿಂದ ಇಂದು ಕಲ್ಯಾಣ ಕರ್ನಾಟಕವಾಗಿದೆ ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ 2ಸಾವಿರಕ್ಕೂ ಹೆಚ್ಚು ವೈದ್ಯರನ್ನು ಸರ್ಕಾರದಿಂದ ನೇರ ನೇಮಕಾತಿ ಮಾಡಲಾಗುವುದು ಇದಲ್ಲದೇ,ಗುಣಮಟ್ಟದ ವೈದ್ಯಕೀಯ ಶಿಕ್ಷಣವನ್ನು ಕಾಯ್ದುಕೊಳ್ಳುವ ಸಂಸ್ಥೆಗಳಿಗೆ ಮಾತ್ರ ಪರವಾನಗಿ ನೀಡಬೇಕು ಎಂದು ಸಚಿವರು ತಿಳಿಸಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಕೋವಿಡ್ -1ಲಸಿಕೆ ನೀಡಲಾಗುತ್ತಿದ್ದು, ಹಲವರು ಭಯಗೊಂಡು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಲಸಿಕೆ ಪಡೆಯುವುದರಿಂದ ಯಾವುದೇ ಸಮಸ್ಯೆಯಾಗುವುದಿಲ್ಲ.ಆದ್ದರಿಂದ ಮೀನಾಮೇಷ ಬಿಟ್ಟು ಲಸಿಕೆ ಪಡೆದು ಕೊರೊನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸುವಂತೆ ಸಚಿವರು ಮನವಿ ಮಾಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: