
ಪ್ರಮುಖ ಸುದ್ದಿಮನರಂಜನೆ
ಎರಡನೇ ಬಾರಿಗೆ ಗಂಡು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್
ದೇಶ(ಮುಂಬೈ)ಫೆ.22:- ಬಾಲಿವುಡ್ ನಟ-ನಟಿಯರಾದ ಕರೀನಾ ಕಪೂರ್ ಖಾನ್ ಮತ್ತು ಸೈಫ್ ಅಲಿ ಖಾನ್ ಮತ್ತೆ ಪೋಷಕರಾಗಿದ್ದಾರೆ.
ಬೇಗಂ ಕರೀನಾ ತಮ್ಮ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ಕರೀನಾ ಗಂಡು ಮಗನಿಗೆ ಜನ್ಮ ನೀಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳ ಮೂಲಕ ತಿಳಿದುಬಂದಿದೆ. ಸೈಫ್ ಅಲಿ ಖಾನ್ ತಮ್ಮ ಮಗು ಮತ್ತು ಹೆಂಡತಿಯನ್ನು ನೋಡಿಕೊಳ್ಳಲು ಈ ದಿನಗಳಲ್ಲಿ ಕೆಲಸದಿಂದ ವಿರಾಮ ತೆಗೆದುಕೊಂಡಿದ್ದಾರೆ. ಇದಕ್ಕೂ ಮೊದಲು, ಈ ದಂಪತಿಗಳು ಹೊಸ ಮನೆಗೆ ಸ್ಥಳಾಂತರಗೊಂಡಿದ್ದರು. (ಏಜೆನ್ಸೀಸ್,ಎಸ್.ಎಚ್)