ದೇಶಪ್ರಮುಖ ಸುದ್ದಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲಿ : ಅರವಿಂದ್ ಕೇಜ್ರೀವಾಲ್ ಒತ್ತಾಯ

ದೇಶ( ನವದೆಹಲಿ)ಫೆ.22:- ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.
ಪಶ್ಚಿಮ ಉತ್ತರ ಪ್ರದೇಶದ ರೈತ ಮುಖಂಡರನ್ನು ಭೇಟಿಯಾಗಿ, ಇವು ರೈತರಿಗೆ ‘ಡೆತ್ ವಾರಂಟ್’ ಇದ್ದಂತೆ ಎಂದು ದೂರಿದ್ದಾರೆ.

ಫೆಬ್ರವರಿ 28 ರಂದು ಪಶ್ಚಿಮ ಉತ್ತರ ಪ್ರದೇಶದ ಮೀರತ್ ‌ನಲ್ಲಿ ‘ಕಿಸಾನ್ ಮಹಾಪಂಚಾಯತ್’ನಲ್ಲಿ ಕೇಜ್ರಿವಾಲ್ ಭಾಷಣ ಮಾಡಲಿದ್ದು, ಇದರ ಅಂಗವಾಗಿ ರೈತ ಮುಖಂಡರನ್ನು ಭೇಟಿ ಮಾಡಿದ್ದಾರೆ.

ಕೇಂದ್ರ ಸರ್ಕಾರವು ತಕ್ಷಣವೇ ಮೂರು ಕರಾಳ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು ಮತ್ತು ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಅನುಸರಿಸಿ ಎಲ್ಲಾ 23 ಬೆಳೆಗಳ ಮೇಲೆ ಕನಿಷ್ಟ ಬೆಂಬಲ ಬೆಲೆಗೆ ಕಾನೂನು ಖಾತರಿ ನೀಡಬೇಕು. ಸರ್ಕಾರ ರೈತರೊಂದಿಗೆ ಮಾತನಾಡಬೇಕು. ಸರ್ಕಾರವೇ ರೈತರ ಮಾತನ್ನು ಕೇಳದಿದ್ದರೆ ಮತ್ತೆ ಯಾರು ಕೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: