
ಪ್ರಮುಖ ಸುದ್ದಿವಿದೇಶ
ಅಮೆರಿಕ: ಕೋವಿಡ್ ನಿಂದ ಮೃತಪಟ್ಟವರಿಗೆ ಇಂದು ಶ್ರದ್ಧಾಂಜಲಿ
ವಾಷಿಂಗ್ಟನ್,ಫೆ.22-ಕೋವಿಡ್ 19 ಸಾಂಕ್ರಾಮಿಕದಿಂದ ಅಮೆರಿಕದಲ್ಲಿ 5 ಲಕ್ಷ ಮಂದಿ ಮೃತಪಟ್ಟಿದ್ದಾರೆ. ಅವರಿಗೆ ಇಂದು ಶ್ವೇತಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಗುವುದು.
ಶ್ವೇತಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಅಧ್ಯಕ್ಷ ಜೋ ಬೈಡನ್ ಅವರು ಮೋಂಬತ್ತಿ ಬೆಳಗಿ, ಮೌನ ಆಚರಣೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಿ ಗೌರವ ಸಲ್ಲಿಸಲಿದ್ದಾರೆ.
ಬೈಡನ್ ಅವರೊಂದಿಗೆ ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್, ಉಪಾಧ್ಯಕ್ಷ ಕಮಲಾ ಹ್ಯಾರಿಸ್ ಮತ್ತು ಅವರ ಪತಿ ಡೌಗ್ ಎಂಮ್ಹಾಪ್ ಅವರು ಭಾಗವಹಿಸುತ್ತಿದ್ದಾರೆ.
ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಒಂದು ತಿಂಗಳ ನಂತರ ಮೊದಲ ಬಾರಿಗೆ ವಾಷಿಂಗ್ಟನ್ನಲ್ಲಿ ನಡೆಯುತ್ತಿರುವ ‘ಕೋವಿಡ್ 19’ ಸಂಬಂಧಿ ಕಾರ್ಯಕ್ರಮದಲ್ಲಿ ಬೈಡನ್ ಪಾಲ್ಗೊಳ್ಳುತ್ತಿದ್ದಾರೆ. (ಏಜೆನ್ಸೀಸ್, ಎಂ.ಎನ್)