ಕ್ರೀಡೆಪ್ರಮುಖ ಸುದ್ದಿ

ಬೌಲರ್ ಉಮೇಶ್ ಯಾದವ್ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆ : ಟೆಸ್ಟ್ ಪಂದ್ಯಕ್ಕೆ ವಾಪಸ್

ದೇಶ( ಮುಂಬೈ)ಫೆ.23:- ಬಲಗೈ ವೇಗದ ಬೌಲರ್ ಉಮೇಶ್ ಯಾದವ್ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆ ಯಾಗಿದ್ದು ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಅಂತಿಮ ಎರಡು ಟೆಸ್ಟ್ ಪಂದ್ಯಗಳಿಗಾಗಿನ ಟೀಮ್ ಇಂಡಿಯಾದಲ್ಲಿ ಸೇರ್ಪಡೆಗೊಳಿಸಲಾಗಿದೆ.

ಈ ಕುರಿತು ಸೋಮವಾರ ಸಂಜೆ ಬಿಸಿಸಿಐ ಟ್ವೀಟ್ ಮಾಡಿದ್ದು, ಅಂತಿಮ ಎರಡು ಪಂದ್ಯಗಳಿಗೆ ಉಮೇಶ್ ಯಾದವ್ ಆಯ್ಕೆಗೆ ಲಭ್ಯವಿರುತ್ತಾರೆ ಎಂಬುದನ್ನು ತಿಳಿಸಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಎರಡು ಟೆಸ್ಟ್ ಪಂದ್ಯಗಳು ಅಹಮದಾಬಾದ್‌ ನ ಮೊಟೇರಾದಲ್ಲಿ ಹೊಸತಾಗಿ ನಿರ್ಮಾಣಗೊಂಡಿರುವ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನಡೆಯಲಿದೆ.(ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: