ಮೈಸೂರು

ಬಸ್ ಬ್ರೇಕ್ ಫೇಲ್ : ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರು

ಹೆಚ್.ಡಿ.ಕೋಟೆಯಿಂದ ಮೈಸೂರು ಕಡೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಬ್ರೇಕ್ ಫೇಲ್ ಆದ ಕಾರಣ ಮರವೊಂದಕ್ಕೆ ತಾಗಿಸಿ ನಿಲ್ಲಿಸಿದ್ದು, ಭಾರೀ ಅನಾಹುತವೊಂದು ತಪ್ಪಿದ ಘಟನೆ ನಡೆದಿದೆ.

ಬುಧವಾರ ಬೆಳಿಗ್ಗೆ ಹೆಚ್.ಡಿ.ಕೋಟೆಯಿಂದ ಮೈಸೂರು ಕಡೆ ಬರುತ್ತಿದ್ದ ರಾಜ್ಯರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ನ ಬ್ರೇಕ್ ಕೂಡಳ್ಳಿ ಬಳಿ ಬರುತ್ತಿದ್ದಂತೆ  ಇದ್ದಕ್ಕಿದ್ದಂತೆ ಫೇಲ್ ಆಗಿದೆ. ಬಸ್ ಚಾಲಕ ತನ್ನ ಸಮಯ ಪ್ರಜ್ಞೆಯಿಂದ ಮರವೊಂದಕ್ಕೆ ಬಸ್ಸನ್ನು ತಾಗಿಸಿ ನಿಲ್ಲಿಸಿದ್ದಾನೆ. ಇದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರಿಗೆ ಅಲ್ಲಿಯೇ ಪ್ರಥಮ ಚಿಕಿತ್ಸೆಯನ್ನೂ ನೀಡಲಾಗಿದೆ. ಹೆಚ್ಚಿನ ಅನಾಹುತಗಳು ಸಂಭವಿಸಿಲ್ಲ. ಹೆಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: