
ಮೈಸೂರು
ರಾಜ್ಯ ಸರ್ಕಾರ ಕೂಡ ಭೂ ಸುಧಾರಣೆ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆಯನ್ನು ತಡೆಹಿಡಿಯಬೇಕು : ಬಡಗಲಪುರ ನಾಗೇಂದ್ರ
ಮೈಸೂರು,ಫೆ.23:- ಸರ್ಕಾರಗಳು ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಮುಂದಾಗಬೇಕು ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.
ಮೈಸೂರು ಪತ್ರಕರ್ತರ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ಕೂಡ ಭೂ ಸುಧಾರಣೆ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆಯನ್ನು ತಡೆಹಿಡಿಯಬೇಕು. ಮತ್ತು ಚರ್ಚೆ ಮಾಡಬೇಕು. ಕಾರ್ಮಿಕ ಕಾಯ್ದೆ ತಿದ್ದುಪಡಿ ತರೋದಕ್ಕೆ ಯೋಚಿಸಿದೆ. ಅದನ್ನು ಕೈಬಿಡಬೇಕು. ಗೋಹತ್ಯೆ ನಿಷೇಧ ಕಾಯ್ದೆ ರೈತರಿಗೆ ಮಾರಕವಾದ ಕಾಯ್ದೆ ಅದನ್ನು ವಾಪಸ್ ಪಡೆಯಬೇಕು. ಸ್ಥಳಿಯ ಸಂಸ್ಥೆ ಕರ್ನಾಟಕದ ಕೆಲವು ಬೆಳೆಗಳಿಗೆ ಬೆಂಬಲ ಬೆಲೆ ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದರು.
ಕಾಫಿ ಬೆಳೆ ಎಂಎಸ್ ಪಿ ಆಗಬೇಕು. 3300ರೂ-4000 ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಕಾಳು ಮೆಣಸು ನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತದೆ ಅಧಿಕೃತವಾಗಲ್ಲ, ಅದನ್ನು ತಡೆಹಿಡಿಯಬೇಕು. ಅಡಿಕೆಗೂ ಕೂಡ ಮಂಡಳಿ ಆಗಬೇಕು. ಮುಸುಕಿನ ಜೋಳ ಖರೀದಿ ಕೇಂದ್ರ ತೆರೆಯಬೇಕು. ಕರ್ನಾಟಕ ರಾಜ್ಯಕ್ಕೆ ಕೊಡಗು ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಕ್ಕೆ 2ಲಕ್ಷಕೋಟಿ ಪರಿಹಾರ ಪ್ಯಾಕೇಜ್ ನೀಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಹೊಸಕೋಟೆ ಬಸವರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)
.