ಮೈಸೂರು

ದಲಿತ ಯುವತಿ ಮೇಲೆ ದೌರ್ಜನ್ಯ ಪ್ರಕರಣ : ಕ್ರಮಕ್ಕೆ ಒತ್ತಾಯ; ಉಗ್ರ ಹೋರಾಟದ ಎಚ್ಚರಿಕೆ

ಮೈಸೂರು,ಫೆ.23:- ಮೈಸೂರು ನಗರದ ಬೋಗಾದಿಯ 2ನೇ ಹಂತದ ಕಾಲೇಜು ವಿದ್ಯಾರ್ಥಿನಿಲಯದಲ್ಲಿನ ದಲಿತ ವಿದ್ಯಾರ್ಥಿನಿಯೋರ್ವಳ ಮೇಲೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಮತ್ತವರ ಸಹಚರರೋರ್ವರು ಜಾತಿನಿಂದನೆ ಮಾಡಿ ದೌರ್ಜನ್ಯವೆಸಗಿರುವುದನ್ನು ದಲಿತ ಸಂಘಟನೆಗಳ ಒಕ್ಕೂಟವು ಖಂಡಿಸುತ್ತದೆ ಮತ್ತು ನಿರ್ದೇಶಕಿ ಹಾಗೂ ಸಹಚರನ ಮೇಲೆ ಕ್ರಮಕ್ಕೆ ಒತ್ತಾಯಿಸುತ್ತದೆ ಎಂದು ಜಿಲ್ಲಾ ಸಂಚಾಲಕ ಮಲ್ಲೇಶ್ ಚುಂಚನಹಳ್ಳಿ ತಿಳಿಸಿದರು.

ಮೈಸೂರು ಪತ್ರಕರ್ತರ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪೊಲೀಸ್ ಠಾಣೆಯಲ್ಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಮೇಘನ, ಇವರ ಸಹಚರರಾದ ಅರುಣ  ವಿರುದ್ಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ಐದು ದಿನವಾದರೂ ಪೊಲೀಸ್ ಇಲಾಖೆ ಇವರುಗಳನ್ನು ಬಂಧಿಸದೇ ಇರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಡುತ್ತದೆ. ಸಮಾಜ ಕಲ್ಯಾಣ ಇಲಾಖೆ ಆಯುಕ್ತರವ ಕಛೇರಿಯಿಂದ ಬಂದಿದ್ದ ಅಧಿಕಾರಿಗಳು ಉನ್ನತ ಅಧಿಕಾರಿಗಳಿಗೆ ಸರಿಯಾದ ಮಾಹಿತಿ ನೀಡದೆ ವಿಳಂಬ ಮಾಡುತ್ತಿರುವುದು ಸಂಶಯಾಸ್ಪದವಾಗಿದ್ದು ಕೂಡಲೇ ಸರ್ಕಾರ ಇಂತಹ ಜಾತಿವಾದಿ ಗೂಂಡ ವರ್ತನೆಯ ಅಧಿಕಾರಿಗಳನ್ನು ಅಮಾನತುಗೊಳಿಸಿ ಅವರ ಸಹಚರರನ್ನು ಬಂಧಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ದಸಂಸ ಜಿಲ್ಲಾ ಸಂಚಾಲಕ ಬನ್ನಹಳ್ಳಿ ಸೋಮಣ್ಣ, ಸಂಚಾಲಕಿ ಪುಟ್ಟಲಕ್ಷ್ಮಮ್ಮ, ಮುಖಂಡರಾದ ರಾಜೇಶ್ ಹರದನಹಳ್ಳಿ, ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: