ದೇಶಪ್ರಮುಖ ಸುದ್ದಿ

ಬಿಹಾರದಲ್ಲಿ ಟ್ರಕ್ ಗೆ ಕಾರು ಡಿಕ್ಕಿ: ಒಂದೇ ಕುಟುಂಬದ 6 ಮಂದಿ ದುರ್ಮರಣ; ಪ್ರಧಾನಿ ಮೋದಿ ಸಂತಾಪ

ಕತಿಹಾರ್,(ಬಿಹಾರ),ಫೆ.23-ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ಬಿಹಾರದ ಕತಿಹಾರ್ ಜಿಲ್ಲೆಯ ಕುರ್ಸೆಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ-31 ರಲ್ಲಿ ಎದುರು ದಿಕ್ಕಿನಿಂದ ಬರುತ್ತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಲ್ಲಾ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಈವರೆಗೆ ಗುರುತಿಸಲಾಗಿಲ್ಲ. ಸಂಚಾರ ಸುಗಮವಾಗಲು ಅಪಘಾತದಿಂದ ಜಖಂ ಆದ ವಾಹನಗಳನ್ನು ಹೆದ್ದಾರಿಯಿಂದ ತೆರವುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು, ಬಿಹಾರದ ಕತಿಹಾರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪ್ರಾಣಹಾನಿ ಸಂಭವಿಸಿದೆ ಎಂಬ ದುಃಖದ ಸುದ್ದಿ ಕೇಳಿದೆ. ಮೃತ ಕುಟುಂಬ ಸದಸ್ಯರಿಗೆ ನಾನು ಸಂತಾಪ ಸೂಚಿಸುತ್ತೇನೆ ಮತ್ತು ಗಾಯಗೊಂಡವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: