ದೇಶಪ್ರಮುಖ ಸುದ್ದಿ

ಜಮ್ಮು-ಕಾಶ್ಮೀರ: ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಶ್ರೀನಗರ,ಫೆ.24- ಜಮ್ಮು-ಕಾಶ್ಮೀರದ ಅನಂತನಾಗ್‌ ಜಿಲ್ಲೆಯಲ್ಲಿ ಭಾರತೀಯ ಸೇನೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ.

ಶ್ರೀಗುಫ್ವಾರದ ಶಾಲ್ಗುಲ್‌ ಅರಣ್ಯ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈಯಲಾಗಿದೆ. ಸ್ಥಳದಲ್ಲಿ ಇನ್ನೂ ಕಾರ್ಯಾಚರಣೆ ಮುಂದುವರೆದಿದ್ದು, 3 ರಿಂದ 4 ಮಂದಿ ಉಗ್ರರು ಅಡಗಿ ಕುಳಿತು ದಾಳಿ ಮಾಡುತ್ತಿದ್ದಾರೆ ಎನ್ನಲಾಗಿದೆ.

ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದು, ಶೋಧ ಕಾರ್ಯ ಆರಂಭಿಸಿದರು. ಈ ಸಂದರ್ಭದಲ್ಲಿ ಉಗ್ರರು ಭದ್ರತಾಪಡೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾಪಡೆ ಪ್ರತಿದಾಳಿ ನಡೆಸಿ ನಾಲ್ವರನ್ನು ಹತ್ಯೆಗೈದಿದ್ದಾರೆ.

ಹತರಾದ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂಬುದು ಇನ್ನೂ ಪತ್ತೆಯಾಗಬೇಕಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್, ಎಂ.ಎನ್)

 

 

Leave a Reply

comments

Related Articles

error: