
ಮೈಸೂರು
ಫೆ.28 : ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ
ಮೈಸೂರು, ಫೆ.24:- ಮೈಸೂರು ನಗರ ಪೊಲೀಸ್ ಕಮಿಷನರೇಟ್ ಘಟಕದ ವ್ಯಾಪ್ತಿಯಲ್ಲಿ ಕರ್ನಾಟಕ ಲೊಕಸೇವಾ ಆಯೋಗದ ವತಿಯಿಂದ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಸಹಾಯಕರು, ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಫೆಬ್ರವರಿ 28 ರಂದು ನಡೆಯುವ ಸ್ಪಧಾತ್ಮಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಗ್ಗೆ 6ರಿಂದ ಸಂಜೆ 6 ಘಂಟೆಯವರೆಗೆ ಕಲಂ 144 ಸಿಆರ್ಪಿಸಿ ಅನ್ವಯ ನಿಷೇದಾಜ್ಞೆಯನ್ನು ಘೋಷಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತ ಅವರು ಆದೇಶ ಹೊರಡಿಸಿದ್ದಾರೆ.
ಈ ಪ್ರದೇಶಗಳಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಗಳನ್ನು ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಅವರು ಆದೇಶಿಸಿದ್ದಾರೆ.