ಮೈಸೂರು

ಚೆಕ್ ಪೋಸ್ಟ್ ನಲ್ಲಿ ಕೋವಿಡ್-19 ಹೊಸ ಮಾರ್ಗಸೂಚಿ ಪ್ರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ

ಮೈಸೂರು,ಫೆ.24:- ಮೈಸೂರು ಜಿಲ್ಲಾ ವ್ಯಾಪ್ತಿಯ ಅಂತರ್ ರಾಜ್ಯ ಗಡಿಚೆಕ್ ಪೋಸ್ಟ್ ಬಾವಲಿಗೆ ಎಸ್ಪಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿದ್ದು, ಜೊತೆಯಲ್ಲಿ ಆರೋಗ್ಯ ಇಲಾಖಾ ಅಧಿಕಾರಿಗಳು ಮತ್ತು ಅರಣ್ಯ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು. ಸ್ಥಳಕ್ಕೆ ವೈನಾಡು ಜಿಲ್ಲೆಯ ಪೊಲೀಸ್ ಅಧೀಕ್ಷಕ ರವೀಂದ್ರ ಭೇಟಿ ನೀಡಿದ್ದಾರೆ. ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕೋವಿಡ್-19 ಹೊಸ ಮಾರ್ಗಸೂಚಿ ಪ್ರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆಗಳನ್ನು ನೀಡಿರುತ್ತಾರೆ.

ಪೊಲೀಸ್ ಅಧೀಕ್ಷಕರು ಮೈಸೂರು ಜಿಲ್ಲೆ ಅವರು ವೈನಾಡು ಅಧೀಕ್ಷಕರಾದ ರವೀಂದ್ರ, ಕೇರಳ ರಾಜ್ಯ ಹಾಗೂ ಅರಣ್ಯ ಇಲಾಖಾಧಿಕಾರಿಗಳು ಮತ್ತು ಹುಣಸೂರು ಉಪವಿಭಾಗದ ಡಿಎಸ್ ಪಿ ರವಿಪ್ರಸಾದ್, ಹೆಚ್.ಡಿ.ಕೋಟೆ ವೃತ್ತ ಸಿಪಿಐ ಪುಟ್ಟಸ್ವಾಮಿ, ಪಿಎಸ್ ಐ ಹೆಚ್.ಡಿ.ಕೋಟೆ ಠಾಣೆ ಪಿಎಸ್ ಐ ಜಯಪ್ರಕಾಶ್ ಅವರುಗಳೊಂದಿಗೆ ಅಂತರರಾಜ್ಯ ಗಡಿ ವಿಷಯಗಳಿಗೆ ಸಂಬಂಧಪಟ್ಟಂತೆ ಹಾಗೂ ಮುಂಬರುವ ಕೇರಳ ರಾಜ್ಯದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿರುತ್ತಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: