ಮೈಸೂರು

ಕೌಟುಂಬಿಕ ಕಲಹದಿಂದ ಮನನೊಂದ ಗೃಹಿಣಿ ಆತ್ಮಹತ್ಯೆ

ಮೈಸೂರು,ಫೆ.25:- ಕೌಟುಂಬಿಕ ಕಲಹದಿಂದ ಮನನೊಂದ ಗೃಹಿಣಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ   ವಿಜಯನಗರದಲ್ಲಿ ನಡೆದಿದೆ.

ಮೃತರನ್ನು ವಿಜಯನಗರ ನಾಲ್ಕನೇ  ಹಂತದ ನಿವಾಸಿ ನಂದಿನಿ (29) ಎಂದು ಗುರುತಿಸಲಾಗಿದೆ.  ಮಕ್ಕಳ ವಿಚಾರವಾಗಿ  ದಂಪತಿಯ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಇದರಿಂದ   ನಂದಿನಿ ಬೇಸತ್ತಿದ್ದರು ಎನ್ನಲಾಗಿದೆ. ಮಂಗಳವಾರ ತಮ್ಮ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ದಂಪತಿಗೆ ಇಬ್ಬರು ಪುಟಾಣಿ ಮಕ್ಕಳು ಇದ್ದಾರೆ. ಈ ಸಂಬಂಧ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: