ಕ್ರೀಡೆಪ್ರಮುಖ ಸುದ್ದಿ

400 ವಿಕೆಟ್ ಪಡೆದ ಜಗತ್ತಿನ ಎರಡನೇ ಕ್ರಿಕೆಟಿಗ ಖ್ಯಾತಿಗೆ ರವಿಚಂದ್ರನ್ ಅಶ್ವಿನ್

ದೇಶ( ಅಹಮದಾಬಾದ್)ಫೆ.26:- ಟೀಂ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್ ನಲ್ಲಿ ವೇಗವಾಗಿ 400 ವಿಕೆಟ್ ಪಡೆದ ಜಗತ್ತಿನ ಎರಡನೇ ಕ್ರಿಕೆಟಿಗ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಅಶ್ವಿನ್ ಅವರು ಜೋಫ್ರಾ ಆರ್ಚರ್ ವಿಕೆಟ್ ಪಡೆಯುವ ಮೂಲಕ 400ನೇ ವಿಕೆಟ್ ಪಡೆದಿದ್ದಾರೆ. ಈ ಮೂಲಕ 400 ವಿಕೆಟ್ ಗಳ ಕ್ಲಬ್ ಸೇರಿದ ಭಾರತದ ನಾಲ್ಕನೇ ಬೌಲರ್ ಆಗಿದ್ದಾರೆ.

ವಿಶ್ವದಲ್ಲಿ ಟೆಸ್ಟ್ ನಲ್ಲಿ ಅತೀ ವೇಗವಾಗಿ 400 ವಿಕೆಟ್ ಪಡೆದ ಸಾಧಕರಲ್ಲಿ ಅಶ್ವಿನ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ 72 ಇನ್ನಿಂಗ್ಸ್ ಗಳಲ್ಲಿ 400 ಟೆಸ್ಟ್ ವಿಕೆಟ್ ಪಡೆದಿದ್ದರೆ ಅಶ್ವಿನ್ 77 ಇನ್ನಿಂಗ್ಸ್ ತೆಗೆದುಕೊಂಡಿದ್ದಾರೆ.

ಟೀಂ ಇಂಡಿಯಾ ಪರ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಗಳ ಪಟ್ಟಿಯಲ್ಲಿ ಮಾಜಿ ಲೆಗ್ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಅಗ್ರಸ್ಥಾನದಲ್ಲಿದ್ದಾರೆ. ಕುಂಬ್ಳೆ 619 ವಿಕೆಟ್ ಪಡೆದಿದ್ದಾರೆ. 434 ವಿಕೆಟ್ ಪಡೆಯುವ ಮೂಲಕ ಕಪಿಲ್ ದೇವ್ ಎರಡನೇ ಸ್ಥಾನದಲ್ಲಿದ್ದರೆ, ಹರ್ಭಜನ್ ಸಿಂಗ್ 417 ವಿಕೆಟ್ ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: