ದೇಶಪ್ರಮುಖ ಸುದ್ದಿ

ಕೋಯಿಕ್ಕೋಡ್ ರೈಲ್ವೆ ನಿಲ್ದಾಣದಲ್ಲಿ ಅಪಾರ ಪ್ರಮಾಣದ ಸ್ಫೋಟಕ ಪತ್ತೆ: ಮಹಿಳೆಯ ಬಂಧನ

ತಿರುವನಂತಪುರಂ,ಫೆ.26- ಸ್ಪೋಟಕಗಳನ್ನು ಸಾಗಿಸುತ್ತಿದ್ದ ಚೆನ್ನೈ ಮೂಲದ ಮಹಿಳೆಯೊಬ್ಬರನ್ನು ಬಂಧಿಸಿರುವ ಪೊಲೀಸರು ಆಕೆಯಿಂದ ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೇರಳದ ಕೋಯಿಕ್ಕೋಡ್ ರೈಲು ನಿಲ್ದಾಣದಲ್ಲಿ 117 ಜಿಲೆಟಿನ್ ಕಡ್ಡಿಗಳು, 350 ಡಿಟೋನೇಟರ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಸ್ಪೋಟಕಗಳನ್ನು ಚೆನ್ನೈ-ಮಂಗಳೂರು ಸೂಪರ್ ಎಕ್ಸ್‌ಪ್ರೆಸ್ ರೈಲಿನ ಸೀಟಿನ ಅಡಿಯಲ್ಲಿ ಇಡಲಾಗಿತ್ತು. ರೈಲ್ವೆ ಪೊಲೀಸರು ತಪಾಸಣೆ ನಡೆಸುವ ಸಂದರ್ಭದಲ್ಲಿ ರೈಲಿನ ಡಿ 1 ಕಂಪಾರ್ಟ್‌ಮೆಂಟ್‌ನಲ್ಲಿ ಸ್ಪೋಟಕಗಳು ಪತ್ತೆಯಾಗಿವೆ.

ತಲಸ್ಸೆರಿಯಿಂದ ಮಹಿಳೆ ಚೆನ್ನೈಗೆ ಪ್ರಯಾಣಿಸುತ್ತಿದ್ದಳು ಎಂದು ತಿಳಿದುಬಂದಿದ್ದು, ಪೊಲೀಸರು ಆಕೆಯ ವಿಚಾರಣೆ ನಡೆಸುತ್ತಿದ್ದಾರೆ. (ಏಜೆನ್ಸೀಸ್, ಎಂ.ಎನ್)

 

Leave a Reply

comments

Related Articles

error: