ದೇಶಪ್ರಮುಖ ಸುದ್ದಿ

ಪಂಚರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ : ಆನ್ ಲೈನ್ ಮೂಲಕವೂ ನಾಮಪತ್ರ ಸಲ್ಲಿಕೆಗೆ ಅವಕಾಶ

ದೇಶ (ನವದೆಹಲಿ)ಫೆ.27:- ಕೇಂದ್ರ ಚುನಾವಣಾ ಆಯೋಗ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯ/ಕೇಂದ್ರಡಾಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ದಿನಾಂಕಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಮಾರ್ಚ್ 27ರಿಂದ ವಿವಿಧ ಹಂತಗಳಲ್ಲಿ ಮತದಾನ ನಡೆಯಲಿದೆ. ಹಾಗೆಯೇ ಮೇ 2ರಂದು ಮತ ಎಣಿಕೆ ನಡೆಯಲಿದೆ.
ಪಶ್ಚಿಮ ಬಂಗಾಳದಲ್ಲಿ ಎಂಟು ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದಲ್ಲಿ 30 ಕ್ಷೇತ್ರಗಳಲ್ಲಿ ಮಾರ್ಚ್ 27ರಂದು ಮತದಾನ,2ನೇ ಹಂತದಲ್ಲಿ 30 ಕ್ಷೇತ್ರಗಳಿಗೆ ಏಪ್ರಿಲ್ 1ರಂದು ಮತದಾನ,3ನೇ ಹಂತದಲ್ಲಿ 31 ಕ್ಷೇತ್ರಗಳಿಗೆ ಏಪ್ರಿಲ್ 6ರಂದು ಮತದಾನ,4ನೇ ಹಂತದಲ್ಲಿ 44 ಕ್ಷೇತ್ರಗಳಿಗೆ ಏಪ್ರಿಲ್ 10ರಂದು ಮತದಾನ,5ನೇ ಹಂತದಲ್ಲಿ 45 ಕ್ಷೇತ್ರಗಳಿಗೆ ಏಪ್ರಿಲ್ 17ರಂದು ಮತದಾನ,6ನೇ ಹಂತದಲ್ಲಿ 43 ಕ್ಷೇತ್ರಗಳಿಗೆ ಏಪ್ರಿಲ್ 22ರಂದು ಮತದಾನ,7ನೇ ಹಂತದಲ್ಲಿ 36 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ,8ನೇ ಹಂತದಲ್ಲಿ 35 ಕ್ಷೇತ್ರಗಳಿಗೆ ಏಪ್ರಿಲ್ 29ರಂದು ಮತದಾನ ನಡೆಯಲಿದೆ.
ಮತ ಎಣಿಕೆ ಮೇ 2ರಂದು ನಡೆಯಲಿದೆ. ತಮಿಳುನಾಡಿನಲ್ಲಿ ಒಂದು ಹಂತದಲ್ಲಿ ಏಪ್ರಿಲ್ 6ರಂದು ಮತದಾನ ನಡೆಯಲಿದ್ದು, ಮತ ಎಣಿಕೆ ಮೇ 2ರಂದು ನಡೆಯಲಿದೆ. ಕನ್ಯಾಕುಮಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಅಂದೇ ನಡೆಯಲಿದೆ.
ಪುದುಚೇರಿಯಲ್ಲಿ ಏಪ್ರಿಲ್ 6ರಂದು ಮತದಾನ ಮತ ಎಣಿಕೆ ಮೇ 2ಕ್ಕೆ ನಡೆಯಲಿದೆ. ಕೇರಳದಲ್ಲಿ
ಒಂದೇ ಹಂತದಲ್ಲಿ ಎಪ್ರಿಲ್ 6ರಂದು ಮತದಾನ ನಡೆಯಲಿದ್ದು ಮತ ಎಣಿಕೆ ಮೇ 2ಕ್ಕೆ ನಡೆಯಲಿದೆ. ಮಲಪ್ಪುರಂ ಲೋಕಸಭೆಗೂ ಅಂದೇ ಉಪಚುನಾವಣೆ ನಡೆಯಲಿದೆ.

ಅಸ್ಸಾಂನಲ್ಲಿ ಮೂರು ಹಂತದ ಚುನಾವಣೆ ನಡೆಯಲಿದ್ದು, ಮೊದಲ ಹಂತ ಮಾರ್ಚ್ 27
2ನೇ ಹಂತ ಏಪ್ರಿಲ್ 1, 3ನೇ ಹಂತ ಏಪ್ರಿಲ್ 6ಕ್ಕೆ ನಡೆಯಲಿದ್ದು ಮತ ಎಣಿಕೆ ಮೇ 2ಕ್ಕೆ ನಡೆಯಲಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿಯ ಚುನಾವಣೆಯು ವಿಭಿನ್ನತೆಗಳಿಂದ ಕೂಡಿರಲಿದೆ. ಈ ಬಾರಿ ಅಭ್ಯರ್ಥಿಗಳು ನಾಮಪತ್ರಗಳನ್ನು ಆನ್‌ ಲೈನ್ ಮೂಲಕವೂ ಸಲ್ಲಿಸಹುದಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಮಾಹಿತಿ ನೀಡಿದ್ದಾರೆ. ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳು ಆನ್ ‌ಲೈನ್ ‌ನಲ್ಲಿ ನಾಮಪತ್ರ ಸಲ್ಲಿಸಲು ವ್ಯವಸ್ಥೆ ಮಾಡಲಾಗುವುದು. ಕೋವಿಡ್-19 ಸುರಕ್ಷತಾ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ಒಂದು ತಾಸು ಹೆಚ್ಚುವರಿ ಮತದಾನಕ್ಕೆ ಅವಕಾಶ ನೀಡಲಾಗುವುದು ಎಂದವರು ವಿವರಿಸಿದರು.

ಅಭ್ಯರ್ಥಿಗಳು ಚುನಾವಣಾ ಆಯೋಗ ಸಿದ್ಧಪಡಿಸಿದ ಸುವಿಧಾ ವೆಬ್‌ ಸೈಟ್ ಮೂಲಕ ಇ-ನಾಮಪತ್ರವನ್ನು ಸಲ್ಲಿಸಬಹುದಾಗಿದೆ. ಒಟ್ಟು 824 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, 2.7 ಲಕ್ಷ ಮತಗಟ್ಟೆಗಳಲ್ಲಿ 18.68 ಕೋಟಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. (ಏಜೆನ್ಸೀಸ್,ಎಸ್.ಎಚ್)

 

Leave a Reply

comments

Related Articles

error: