ಸುದ್ದಿ ಸಂಕ್ಷಿಪ್ತ

ಒಳಚರಂಡಿ ಸಂಪರ್ಕಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ವಿಶೇಷ ಘಟಕ ಯೋಜನೆಯಡಿ ನಂಜನಗೂಡು ನಗರ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ವಾಸಿಸುವ ಮನೆಗಳಿಗೆ ಒಳಚರಂಡಿ ಗೃಹ ಸಂಪರ್ಕವನ್ನು ಕಲ್ಪಿಸಿ ಕೊಡಲು ಅರ್ಜಿ ಆಹ್ವಾನಿಸಿದೆ.

ಆಸಕ್ತ  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ನಂಜನಗೂಡು ನಗರಸಭಾ ಕಾರ್ಯಾಲಯದಿಂದ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಏಪ್ರಿಲ್ 30 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08221- 226236 ನ್ನು ಸಂಪರ್ಕಿಸಬಹುದು.

 

Leave a Reply

comments

Related Articles

error: