ಮೈಸೂರು

ವಿಪ್ರ ಸಮ್ಮಿಲನ ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು,ಫೆ.28:-  ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ
ವಿಶ್ವೇಶ್ವರ ನಗರದಲ್ಲಿರುವ ಸಿಂಧೂರ ಕನ್ವೇಷನ್ ಹಾಲ್ ನಲ್ಲಿ ಇಂದು ವಿಪ್ರ ಸಮ್ಮಿಲನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯವಹಿಸಿದ್ದ ಪೇಜಾವರ ಮಠದ ಶ್ರೀ ವಿಶ್ವೇಶ್ವರ ಪ್ರಸನ್ನತೀರ್ಥರು ,ಗಣಪತಿ ಸಚ್ಚಿದಾನಂದ ಮಠದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ,ಪರಕಾಲ ಮಠದ ಶ್ರೀ ಕಾರ್ಯಂ ಆದ
ವೆಂಕಟ್ ನಾಥನ್ ,ಶಾಸಕರಾದ ಎಸ್ ಎ ರಾಮದಾಸ್ ,ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಎಚ್ ವಿ ರಾಜೀವ್ ,ವಿಧಾನ ಪರಿಷತ್ ಮಾಜಿ ಸದಸ್ಯರಾದ ಗೋ ಮಧುಸೂದನ್ ,ಬಿಜೆಪಿ ನಗರಾಧ್ಯಕ್ಷರಾದ ಟಿ ಎಸ್ ಶ್ರೀವತ್ಸ ,ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ,ಕರ್ನಾಟಕ ಸರಕಾರದ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕರಾದ ಎಂ ಆರ್ ಬಾಲಕೃಷ್ಣ , ಸಿ ವಿ ಗೋಪಿನಾಥ್ ,ಹಿರಿಯ ಸಮಾಜ ಸೇವಕರಾದ ಕೆ ರಘುರಾಂ ವಾಜಪೇಯಿ ,ನಗರಪಾಲಿಕೆ ಸದಸ್ಯ ಮಾ ವಿ ರಾಮಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: