ಮೈಸೂರು

ಕೌಟುಂಬಿಕ ಕಲಹಕ್ಕೆ ಬೇಸತ್ತು ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಮೈಸೂರು,ಫೆ.28:- ಕೌಟುಂಬಿಕ ಕಲಹಕ್ಕೆ ಬೇಸತ್ತು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ  ನಡೆದಿದೆ.

ಮೃತನನ್ನು ವೆಂಕಟನಗರ ಬಡಾವಣೆಯ ಉಮೇಶ್ ಎಂದು ಗುರುತಿಸಲಾಗಿದೆ. ಒಂದೂವರೆ ವರ್ಷದ ಹಿಂದೆ ತಿ.ನರಸೀಪುರ ತುಂಬಲ ಗ್ರಾಮದ ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಈ ಹಿನ್ನೆಲೆಯಲ್ಲಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಗಂಡನಿಗೆ ದುಡಿಮೆ ಇಲ್ಲ ಎಂದು ಪತ್ನಿ ತವರಿಗೆ ಸೇರಿದ್ದಳು. ಒಂದು ಮಗು ತಂದೆಯಾದರೂ ಸಂಸಾರದ ಜವಾಬ್ದಾರಿ ಹೊರುವಲ್ಲಿ ವಿಫಲನಾಗಿದ್ದಾನೆ ಎಂದು ಗಂಡ, ಹೆಂಡತಿ ನಡುವೆ ಆಗಾಗ ಜಗಳವಾಗುತ್ತಿತ್ತು. ಇದರಿಂದ ಬೇಸತ್ತು ಉಮೇಶ್‌ ನೇಣಿಗೆ ಶರಣಾಗಿದ್ದಾನೆ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: