ಮೈಸೂರು

ಮೇ.2: ಭಗೀರಥ ಜಯಂತಿ ಆಚರಣೆ : ಸಿ.ಎಲ್.ಆನಂದ್

ಮೈಸೂರು  ಜಿಲ್ಲಾಡಳಿತ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮೇ 2 ರಂದು ಬೆಳಿಗ್ಗೆ 11 ಗಂಟೆಗೆ ಕಲಾಮಂದಿರದಲ್ಲಿ ಅದ್ದೂರಿಯಾಗಿ ಭಗೀರಥ ಜಯಂತಿ ಆಚರಿಸಲಾಗುವುದು ಎಂದು ಮೈಸೂರು ಉಪವಿಭಾಗಾಧಿಕಾರಿ ಸಿ.ಎಲ್. ಆನಂದ್ ತಿಳಿಸಿದರು.
ಬುಧುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಭಗೀರಥ ಜಯಂತಿ ಆಚರಣೆ ಸಂಬಂಧ ಹಮ್ಮಿಕೊಳ್ಳಲಾದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮೇ 2 ರಂದು ಬೆಳಿಗ್ಗೆ 9.30 ಗಂಟೆಗೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಿಂದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಮೆರವಣಿಗೆಯು ಕೆ.ಆರ್.ವೃತ್ತ, ದೇವರಾಜ ಅರಸು ರಸ್ತೆ ಮುಖಾಂತರ ಕಲಾಮಂದಿರ ತಲುಪಲಿದೆ. ವೇದಿಕೆ ಕಾರ್ಯಕ್ರಮ ಪ್ರಾರಂಭವಾಗುವುದಕ್ಕೂ ಮುನ್ನ ಬೆಳಿಗ್ಗೆ 10 ಗಂಟೆಗೆ ಭಗೀರಥ ಕುರಿತು ಸುಗಮ ಸಂಗೀತ ಕಾರ್ಯಕ್ರಮ ಹಾಗೂ ಉದ್ಘಾಟನೆಯ ನಂತರ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದರು.
ಸಭೆಯಲ್ಲಿ ಭಾಗವಹಿಸಿದ್ದ ಸಂಘ ಸಂಸ್ಥೆಯ ಪದಾಧಿಕಾರಿಗಳುಈಗ  ಬೇಸಿಗೆ ಕಾಲವಾಗಿದ್ದು ಮೆರವಣಿಗೆಗೆ ವಿವಿಧ ಸ್ಥಳಗಳಿಂದ ಜನರು ಆಗಮಿಸಲಿದ್ದಾರೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರು ಒಟ್ಟಿಗೆ ಸೇರುವವರೆಗೆ ಅವರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಉಪವಿಭಾಗಾಧಿಕಾರಿಗಳು ಮೆರವಣಿಗೆ ಪ್ರಾರಂಭವಾಗುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮೆರವಣಿಗೆಗೂ ಮುನ್ನ ಆಗಮಿಸುವ ಜನರಿಗೆ ಕುಳಿತುಕೊಳ್ಳಲು ಕುರ್ಚಿ, ಕುಡಿಯುವ ನೀರು ಹಾಗೂ ಪ್ಯಾಂಡಲ್ ವ್ಯವಸ್ಥೆ ಮಾಡುವಂತೆ ಮೈಸೂರು ಮಹಾನಗರಪಾಲಿಕೆ ಅವರಿಗೆ ತಿಳಿಸಿದರು.
ಉಪನ್ಯಾಸಕ್ಕೆ ಮೈಸೂರು ಮಹಾನಗರಪಾಲಿಕೆಯ ಸಹಾಯಕ ಅಧಿಕಾರಿ ಎ.ಟಿ. ಸೋಮಶೇಖರಪ್ಪ ಅವರನ್ನು ಆಹ್ವಾನಿಸಬೇಕೆಂದು ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ ಡಿ.ಜಗನ್ನಾಥ ಸಾಗರ್ ಮುಖ್ಯ ಭಾಷಣಕಾರರಿಗೆ ಉಪನ್ಯಾಸದಲ್ಲಿ ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ಹೆಚ್ಚು ಒತ್ತು ನೀಡಿ ಉಪನ್ಯಾಸ ನೀಡುವಂತೆ ತಿಳಿಸಲಾಗುವುದು ಎಂದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚನ್ನಪ್ಪ, ಸಂಘ ಸಂಸ್ಥೆಗಳ ಮುಖ್ಯಸ್ಥ ರವಿಶಂಕರ್, ರಂಗಪ್ಪ, ಮೋಹನ ಕುಮಾರ್, ಹೇಮಾವತಿ, ಮರಿಶೆಟ್ಟಿ, ಜಗನ್ನಾಥ ಸಾಗರ ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು. (ಬಿ.ಎಂ-ಎಸ್.ಎಚ್)

Leave a Reply

comments

Related Articles

error: